ಕಾರವಾರ: ನಾಪತ್ತೆಯಾಗಿದ್ದ ಇಬ್ಬರೂ ಪೊಲೀಸ್ ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಹೇಳಿದ್ದಾರೆ.

ಡಿವೈಎಸ್ ಪಿ ಶಂಕರ್ ಮಾರಿಹಾಳ, ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿ ರವಿಚಂದ್ರ ಬೆಳಿಗ್ಗೆ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿದ್ದಾರೆ. ಆದರೆ, ಕಾಡಿನಲ್ಲಿರುವ ಅವರನ್ನು ಪತ್ತೆ ಮಾಡಲಾಗುತ್ತಿದೆ. ಯಾವ ಸ್ಥಳದಲ್ಲಿದ್ದಾರೆ ಎಂಬ ಮಾಹಿತಿ ಅವರಿಗೂ ತಿಳಿದಿರದ ಕಾರಣ ಹುಡುಕಾಟ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಯಾಟಲೈಟ್ ಕರೆಯೊಂದನ್ನು ಆಧರಿಸಿ ಭಾನುವಾರ ಬೆಳಿಗ್ಗೆ ಹುಡುಕಾಟಕ್ಕೆ ತೆರಳಿದ್ದ ಮಾರಿಹಾಳ ಅವರ ತಂಡ, ಕೈಗಾದ ಬಾರೆ ರಸ್ತೆಯ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆಯಲ್ಲಿ ನಿರತವಾಗಿತ್ತು. ಈ ವೇಳೆ ಆಕಸ್ಮಿಕವಾಗಿ ಮಾರಿಹಾಳ ಹಾಗೂ ರವಿಚಂದ್ರ ಅವರು ದಾರಿತಪ್ಪಿದ್ದರು. ಇದರಿಂದಾಗಿ ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ತಂಡ ರಚಿಸಿಕೊಂಡು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ದೇವರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್ ಕೂಡ ಕದ್ರಾ ಭಾಗಕ್ಕೆ ಭೇಟಿ ನೀಡಿ, ರಾತ್ರಿ ಮೊಕ್ಕಾಂ ಹೂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.