ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಕಾಂಗ್ರೆಸ್‌ನಿಂದ ಕಿಸಾನ್ ಅಧಿಕಾರ ದಿವಸ ಆಚರಣೆ

Last Updated 31 ಅಕ್ಟೋಬರ್ 2020, 5:53 IST
ಅಕ್ಷರ ಗಾತ್ರ

ಶಿರಸಿ: ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಶನಿವಾರ ‘ಕಿಸಾನ್ ಅಧಿಕಾರ ದಿವಸ’ ಆಚರಿಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ಮಸೂದೆ ವಿರುದ್ಧ ಪ್ರತಿಭಟಿಸಿದರು.

ಇಲ್ಲಿನ ಬಸ್ ನಿಲ್ದಾಣ ವೃತ್ತದಿಂದ ಬಿಡ್ಕಿಬೈಲಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ಗಾಂಧಿ ಪ್ರತಿಮೆಗೆ ಪೂಜೆ ಸಲ್ಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ, ‘ಬಿಜೆಪಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಈಗಾಗಲೆ ಅವರ ಕೆಟ್ಟ ಆಡಳಿತ ಜನರಿಗೆ ಮನವರಿಕೆ ಆಗುತ್ತಿದೆ’ ಎಂದರು.

ಪ್ರತಿಭಟನೆಗೂ ಮುನ್ನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ, ಇಂದಿರಾ ಗಾಂಧಿ ಪುಣ್ಯಸ್ಮರಣೆ ಆಚರಿಸಲಾಯಿತು. ಪ್ರಮುಖರಾದ ಎಸ್.ಕೆ.ಭಾಗವತ, ಆರ್.ಎಚ್.ನಾಯ್ಕ, ದೀಪಕ ದೊಡ್ಡೂರು, ಅಬ್ಬಾಸ್ ತೊನ್ಸೆ, ರಮೇಶ ದುಬಾಶಿ, ಬಸವರಾಜ ದೊಡ್ಮನಿ, ಜಗದೀಶ ಗೌಡ, ಸಂತೋಷ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT