ಶುಕ್ರವಾರ, ಏಪ್ರಿಲ್ 23, 2021
30 °C

ಕಿಸಾನ್ ಸಮ್ಮಾನ್ ನಿಧಿಗೆ ನೋಂದಣಿ: ರಾಜ್ಯದಲ್ಲಿ ಕಾರವಾರ ಜಿಲ್ಲೆ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿ ಜಿಲ್ಲೆಯಲ್ಲಿ ಶೇ 101.92ರಷ್ಟು ರೈತರು ನೋಂದಾಯಿಸಿಕೊಂಡಿದ್ದಾರೆ. ಆ ಮೂಲಕ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಹೇಳಿದ್ದಾರೆ.

‘ಈ ಯೋಜನೆಯ ಅಡಿ ರೈತರನ್ನು ನೋಂದಾಯಿಸಲು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಗುರಿ ನೀಡಲಾಗಿತ್ತು. ಅದರಂತೆ, ಜುಲೈ 15ರ ವರದಿಯಂತೆ ರಾಜ್ಯದ ಎಲ್ಲ ಜಿಲ್ಲೆಗಳ ಪೈಕಿ ಉತ್ತರ ಕನ್ನಡ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯ ಎಲ್ಲ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯ ಪರಿಶ್ರಮದಿಂದ ಈ ದಾಖಲೆ ಸಾಧ್ಯವಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘2015- 16ರ ಕೃಷಿ ಗಣತಿಯಂತೆ ಜಿಲ್ಲೆಯಲ್ಲಿ ಒಟ್ಟು 1,99,241 ಹಿಡುವಳಿದಾರರಿದ್ದು, ಈ ಪೈಕಿ 54,278 ಹಿಡುವಳಿದಾರರನ್ನು ಅನರ್ಹರೆಂದು ಗುರುತಿಸಲಾಗಿದೆ. ಪರಿಷ್ಕೃತಗೊಳಿಸಿದ ಪಟ್ಟಿಯಂತೆ 1,44,963 ಗುರಿಯಲ್ಲಿ 1,47,751 ರೈತರನ್ನು ಪಿಎಂ ಕಿಸಾನ್ ಯೋಜನೆಯ ಅಡಿ ನೋಂದಾಯಿಸಲಾಗಿದೆ’ ಎಂದು ಹೇಳಿದ್ದಾರೆ.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪಗೌಡ, ‘ರೈತರ ಅನುಕೂಲಕ್ಕಾಗಿಯೇ ಹೊಸದಾಗಿ ಪ್ರತ್ಯೇಕ ವೆಬ್ಸೈಟ್‌ ಒಂದನ್ನು ಪರಿಚಯಿಸಲಾಗಿದೆ. ಹೊರಭಾಗದಲ್ಲಿರುವ ರೈತರು ಇ ದರಲ್ಲೇ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಿಂದ ಹೊರಗಿರುವ ರೈತರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ’ ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು