ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುದ್ಧಿಮಾಂದ್ಯ ಮಕ್ಕಳಿಗೆ ಉಚಿತ ಔಷಧ

Last Updated 1 ಮೇ 2020, 13:27 IST
ಅಕ್ಷರ ಗಾತ್ರ

ಶಿರಸಿ: ಇಲ್ಲಿನ ಅಜಿತ ಮನೋಚೇತನಾ ಕೇಂದ್ರದ ವಿಕಾಸ ಶಾಲೆಯ ಬುದ್ಧಿಮಾಂದ್ಯ ಮಕ್ಕಳಿಗೆ ಅನುಕೂಲವಾಗುವಂತೆ ಅವರ ಪಾಲಕರಿಗೆ ದಿನಸಿ ಕಿಟ್‌ ಹಾಗೂ ವೈದ್ಯರ ಸಲಹೆ ಮೇರೆಗೆ ಮಕ್ಕಳಿಗೆ ಔಷಧ ಕಿಟ್‌ಗಳನ್ನು ಶುಕ್ರವಾರ ಇಲ್ಲಿ ವಿತರಿಸಲಾಯಿತು. ಸುಮಾರು 24 ಪಾಲಕರು ಒಟ್ಟು ₹ 50ಸಾವಿರ ಮೌಲ್ಯದ ಕಿಟ್‌ಗಳನ್ನು ಪಡೆದರು.

ಸಿರಿಧಾನ್ಯ ಸೇರಿದಂತೆ ಮಕ್ಕಳ ಬೆಳವಣಿಗೆಗೆ ಪೂರಕವಾದ ಶಕ್ತಿವರ್ಧಕ ಆಹಾರ ಸಾಮಗ್ರಿಗಳಿರುವ ಕಿಟ್ ಅನ್ನು ಅಜಿತ ಮನೋಚೇತನಾ ಸಂಸ್ಥೆಯ ಪದಾಧಿಕಾರಿಗಳು ಪಾಲಕರಿಗೆ ವಿತರಿಸಿದರು. ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ಅವರು, ಉತ್ತರ ಕನ್ನಡ ಜಿಲ್ಲೆ ಕೊರೊನಾದಿಂದ ಮುಕವಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರೂ ಎದ್ದುನಿಂತು ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಸುಧೀರ ಭಟ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ನರ್ಮದಾ ಹೆಗಡೆ ವಂದಿಸಿದರು. ನಿವೃತ್ತ ಅಧಿಕಾರಿ ಆರ್.ಎ.ಖಾಜಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT