ಶಾಲೆಗಳಿಗೂ ಕಿಚನ್‍ಕಿಟ್ ವಿಸ್ತರಿಸಲು ಸಲಹೆ

7

ಶಾಲೆಗಳಿಗೂ ಕಿಚನ್‍ಕಿಟ್ ವಿಸ್ತರಿಸಲು ಸಲಹೆ

Published:
Updated:
Deccan Herald

ಕಾರವಾರ: ಮಧ್ಯಾಹ್ನದ ಬಿಸಿಯೂಟ ಯೋಜನೆಯಿರುವ ಸರ್ಕಾರಿ ಶಾಲೆಗಳಿಗೂ ತೋಟಗಾರಿಕೆ ಇಲಾಖೆಯ ಕಿಚನ್‍ಕಿಟ್ ಯೋಜನೆಯನ್ನು ವಿಸ್ತರಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮೊಹಮ್ಮದ್ ರೋಶನ್ ಸಲಹೆ ನೀಡಿದ್ದಾರೆ.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಿಗೂ ಕಿಚನ್ ಕಿಟ್ ವಿತರಿಸುವುದರಿಂದ ತಾಜಾ ತರಕಾರಿಗಳನ್ನು ವಿದ್ಯಾರ್ಥಿಗಳು ಬೆಳೆದು ಮಧ್ಯಾಹ್ನದ ಬಿಸಿಯೂಟಕ್ಕೆ ಬಳಸಬಹುದು. ಈಗಾಗಲೇ ತಾರಸಿ ತೋಟ, ಕೈತೋಟಕ್ಕೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಉದ್ದೇಶದಿಂದಲೇ ಜಾರಿಗೆ ತರಲಾಗಿರುವ ಕಿಚನ್ ಕಿಟ್ ಅನ್ನು ಮಧ್ಯಾಹ್ನದ ಬಿಸಿಯೂಟ ಯೋಜನೆಯಿರುವ ಶಾಲೆಗಳಿಗೆ ವಿಸ್ತರಿಸಬಹುದು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗರ್ಭಿಣಿಯರಿಗೆ ಬಿಸಿಯೂಟ, ಹಾಲು, ಮೊಟ್ಟೆ ಹಾಗೂ ಚಿಕ್ಕಿ ಕೊಡುವ ಯೋಜನೆ ಬದಲು, ನೇರವಾಗಿ ಅವರ ಖಾತೆಗೆ ಹಣ ತುಂಬುವುದು ಸೂಕ್ತ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಸೂಚಿಸಲಾಯಿತು.

ಈ ಯೋಜನೆಯಡಿ ತುಂಬು ಗರ್ಭಿಣಿಯರು ಅಂಗವಾಡಿಗೆ ಬಂದು ಆಹಾರ ಪಡೆಯಲು ಸಾಧ್ಯವಾಗುವುದಿಲ್ಲ. ಅದರಿಂದ ಯೋಜನೆಯ ಉದ್ದೇಶ ಈಡೇರುತ್ತಿಲ್ಲ. ಆದ್ದರಿಂದ ಸರ್ಕಾರದ ಗಮನ ಸೆಳೆಯುವುದು ಸೂಕ್ತ ಎಂದು ಜಯಶ್ರೀ ಮೊಗೇರ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ರೇಣಕೆ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜಯ ಮಾರುತಿ ಹಣಬರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯಕ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !