ಶನಿವಾರ, ಆಗಸ್ಟ್ 13, 2022
24 °C

ಶಾಸಕ ದಿನಕರ ಶೆಟ್ಟಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಮಟಾ (ಉತ್ತರ ಕನ್ನಡ): ಶಾಸಕ ದಿನಕರ ಶೆಟ್ಟಿ ಅವರಿಗೆ ಕೋವಿಡ್ 19 ಭಾನುವಾರ ದೃಢಪಟ್ಟಿದೆ.

ಅವರು ಸ್ವಯಂ ಪ್ರೇರಿತರಾಗಿ ಆಸ್ಪತ್ರೆಗೆ ‌ಹೋಗಿ ಕೋವಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಅವರಿಗೆ ಕೋವಿಡ್ ದೃಢಪಟ್ಟಿದೆ ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ ನಾಯ್ಕ ತಿಳಿಸಿದರು.

ಅವರ ಆಪ್ತ ಸಹಾಯಕ ಅಶೋಕ ಭಟ್, ಕಾರು ಚಾಲಕ ಪ್ರಭಾಕರ, ಪತ್ನಿ, ಪುತ್ರಿ ಅವರ ಕೋವಿಡ್ ವರದಿಯು ನೆಗೆಟಿವ್ ಬಂದಿದೆ. ‘ಅನಾರೋಗ್ಯದ ಯಾವ ಲಕ್ಷಣಗಳೂ ನನಗೆ ಕಾಣಿಸಿಕೊಂಡಿಲ್ಲ. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಹೋಗುತ್ತಿದ್ದೇನೆ’ ಎಂದು ದಿನಕರ ಶೆಟ್ಟಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.