ಸೋಮವಾರ, ಅಕ್ಟೋಬರ್ 26, 2020
23 °C
ಶಿರಸಿ– ಕುಮಟಾ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ

ಅ.12ರಿಂದ 18 ತಿಂಗಳು ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ರಾಷ್ಟ್ರೀಯ ಹೆದ್ದಾರಿಯನ್ನಾಗಿ (ಸಂಖ್ಯೆ 766 ಇಇ) ಮೇಲ್ದರ್ಜೆಗೇರಿಸುವ ಕಾಮಗಾರಿ ಸಲುವಾಗಿ ಶಿರಸಿ– ಕುಮಟಾ ರಸ್ತೆಯಲ್ಲಿ ಅ.12ರಿಂದ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. 18 ತಿಂಗಳ ಅವಧಿಗೆ ಇದು ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದಾರೆ.

ಪರ್ಯಾಯ ರಸ್ತೆಗಳು: ಕರಾವಳಿ ಮತ್ತು ಹುಬ್ಬಳ್ಳಿ, ಹಾವೇರಿ ಭಾಗಕ್ಕೆ ಸಂಪರ್ಕ ಕೊಂಡಿಯಾಗಿದ್ದ ಈ ರಸ್ತೆಗೆ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ.

ಕುಮಟಾದಿಂದ ಸಿದ್ದಾಪುರದ ಮೂಲಕ ಸಾಗಿ ಶಿರಸಿಗೆ ತಲುಪುವುದು (ಲಘು ವಾಹನಗಳು ಮಾತ್ರ), ಅಂಕೋಲಾದಿಂದ ಯಲ್ಲಾಪುರಕ್ಕೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಾಗಿ ರಾಜ್ಯ ಹೆದ್ದಾರಿ 93ರಲ್ಲಿ ಶಿರಸಿಗೆ ಹೋಗುವುದು. ಹೊನ್ನಾವರದಿಂದ ಮಾವಿನಗುಂಡಿ ಮೂಲಕ ಸಾಗಿ ಸಿದ್ದಾಪುರಕ್ಕೆ ಹೋಗಿ ಶಿರಸಿಗೆ ತಲುಪಬಹುದು. ಈ ರಸ್ತೆಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಮೇಲ್ದರ್ಜೆಗೇರಲಿರುವ ರಸ್ತೆಯಲ್ಲಿ ಕುಮಟಾದಿಂದ ಶಿರಸಿಗೆ 60 ಕಿಲೋಮೀಟರ್ ದೂರವಾಗುತ್ತಿತ್ತು. ಈಗ ಸಿದ್ದಾಪುರದ ಮೂಲಕ ಸಾಗಿದರೆ ಸುಮಾರು 90 ಕಿಲೋಮೀಟರ್, ಹೊನ್ನಾವರದ ಮೂಲಕ ಸಾಗಿದರೆ 125 ಕಿಲೋಮೀಟರ್, ಯಲ್ಲಾಪುರದ ಮೂಲಕ ಸಾಗಿದರೆ ಸುಮಾರು 155 ಕಿಲೋಮೀಟರ್ ದೂರವಾಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು