ಸುರತ್ಕಲ್: ತಡೆಗೋಡೆಯೊಂದು ಬಿದ್ದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ಶನಿವಾರ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ನೀರುಮಾರ್ಗ ನಿವಾಸಿ ಉಮೇಶ (38) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಎನ್ನಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು ಬಿದ್ದಿದೆ ಪರಿಣಾಮ ಪಕ್ಕದಲ್ಲಿ ಕೆಲಸ ಮಾಡುತಿದ್ದ ಕೂಲಿಕಾರ್ಮಿಕರ ಮೇಲೆ ಬೀಳುತ್ತಿದ್ದಂತೆ ಇಬ್ಬರು ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾನೆ.

ಕೊಡಲೇ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಸ್ಥಳೀಯರು ಜೆಸಿಬಿ ಯಂತ್ರದ ಮೂಲಕ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕನನ್ನು ಹೊರತೆಗೆಯಲಾಗಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.