ಶನಿವಾರ, ಡಿಸೆಂಬರ್ 4, 2021
26 °C

ಸಿದ್ದರಾಮಯ್ಯ, ಎಚ್‌ಡಿಕೆಗೆ ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ: ಹೆಬ್ಬಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ರಾಜಕೀಯವಾಗಿ ಹತಾಶರಾಗಿರುವ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆರ್‌ಎಸ್ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಅವರಿಬ್ಬರಿಗೆ ತಾವು ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ' ಎಂದು ಲೇವಡಿ ಮಾಡಿದರು.

'ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪರಸ್ಪರ ಟೀಕಿಸಿಕೊಳ್ಳುತ್ತಾರೆ. ಒಮ್ಮೆಲೆ ಸಂಘ ಪರಿವಾರದ ಮೇಲೆ ಹರಿಹಾಯುತ್ತಾರೆ. ಇದು ಅವರಿಬ್ಬರೂ ಗೊಂದಲ್ಲಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಿದೆ' ಎಂದರು.

'ವಿಜಯದಶಮಿ ಮುಗಿಯಲಿ ಎಂದು ಕಾಯುತ್ತಿದ್ದೆವು. ಇಂದಿನಿಂದ ಎಲ್ಲ ಸಚಿವರೂ ಹಾನಗಲ್ ಕ್ಷೇತ್ರದಲ್ಲಿ ಬೀಡು ಬಿಡಲಿದ್ದು ಅ.28ರ ವರೆಗೆ ನಿರಂತರ ಪ್ರಚಾರ ನಡೆಸಲಿದ್ದೇವೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು