ಗುರುವಾರ , ಏಪ್ರಿಲ್ 15, 2021
24 °C

ರೈಲು ಬಡಿದು ಚಿರತೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ತಾಲ್ಲೂಕಿನ ಅಮದಳ್ಳಿ ಬಳಿ ಶನಿವಾರ ಮುಂಜಾನೆ ರೈಲು ಬಡಿದು ಗಂಡು ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ.

ಮಂಗಳೂರಿನಿಂದ ಕಾರವಾರದ ಕಡೆ ಬರುತ್ತಿದ್ದ ರೈಲಿಗೆ ಚಿರತೆಯು ಸಿಲುಕಿ ಅದರ ಕಾಲು ತುಂಡಾಗಿದ್ದು, ಅಧಿಕ ರಕ್ತಸ್ರಾವವಾಗಿತ್ತು. ಚಿರತೆಗೆ ಅಂದಾಜು ಮೂರು ವರ್ಷ ಆಗಿರಬಹುದು. ಪಶುವೈದ್ಯ ದೀಪಕ್ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು.

ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಸಂತ ರೆಡ್ಡಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಭೇಟಿ ಪರಿಶೀಲನೆ ನಡೆಸಿದರು. ಕಾರವಾರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.