ಶುಕ್ರವಾರ, ಜೂಲೈ 10, 2020
22 °C
66 ದಿನಗಳ ಬಳಿಕ ಲಾಕ್‌ಡೌನ್‌ ನಿಯಮಗಳ ಷರತ್ತುಬದ್ಧ ಸಡಿಲಿಕೆ

ಭಟ್ಕಳ: ನಾಳೆಯಿಂದ ವ್ಯಾಪಾರ, ವಹಿವಾಟಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಟ್ಕಳ: ‘ಕೋವಿಡ್ 19 ಸೋಂಕಿನಿಂದ ‘ಹಾಟ್‌ಸ್ಪಾಟ್’ ಆಗಿದ್ದ ಭಟ್ಕಳದ ಕಂಟೈನ್‌ಮೆಂಟ್ ವಲಯದಲ್ಲಿ 66 ದಿನಗಳ ಬಳಿಕ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಮೇ 29ರಿಂದಲೇ ವ್ಯಾಪಾರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಗುರುವಾರ ತಿಳಿಸಿದರು.

ಬೆಳಿಗ್ಗೆ ಎಂಟರಿಂದ ಮಧ್ಯಾಹ್ನ ಎರಡು ಗಂಟೆಯವರೆಗೆ ಬ್ಯಾಂಕ್, ಆಟೊಮೊಬೈಲ್, ಸಲೂನ್, ಕಿರಾಣಿ ಸೇರಿದಂತೆ ಎಲ್ಲ ರೀತಿಯ ಅಂಗಡಿ ಮುಂಗಟ್ಟುಗಳನ್ನು ತೆರೆಯುವುದಕ್ಕೆ ಅವಕಾಶ ನೀಡಲಾಗುತ್ತಿದೆ. ಆಟೊರಿಕ್ಷಾ ಸಂಚಾರಕ್ಕೂ ಅನುಮತಿ ನೀಡಲಾಗುತ್ತಿದೆ. ಇದು ಜೂನ್ 8ರವರೆಗೆ ಜಾರಿಯಲ್ಲಿರುತ್ತದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.

ಈ ಅವಧಿಯಲ್ಲಿ ಜನರು ಮುಖಗವಸು ಧರಿಸುವುದು, ಅಂತರ ಕಾಯ್ದುಕೊಳ್ಳವುದು ಕಡ್ಡಾಯ. ಗ್ರಾಹಕರು ಇವುಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ವರ್ತಕರ ಜವಾಬ್ದಾರಿಯೂ ಆಗಿದೆ. ಒಂದುವೇಳೆ, ನಿಯಮ ಮೀರಿದರೆ ಅಂಗಡಿಯ ಪರವಾನಗಿಯನ್ನು ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಡಿ.ವೈ.ಎಸ್.ಪಿ ನಿಖಿಲ್.ಬಿ, ಉಪ ವಿಭಾಗಾಧಿಕಾರಿ ಭರತ್.ಎಸ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು