ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞರನ್ನು ಕ್ವಾರಂಟೈನ್ ಮಾಡಬೇಕು ಎಂದು ಗ್ರಾಪಂ ಸದಸ್ಯರ ಸಾಮೂಹಿಕ ರಾಜೀನಾಮೆ

Last Updated 2 ಮೇ 2020, 21:21 IST
ಅಕ್ಷರ ಗಾತ್ರ

ಕಾರವಾರ:ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಉತ್ತರಾಖಂಡದಿಂದ ಬಂದಿರುವ ತಂತ್ರಜ್ಞರನ್ನು ಕ್ವಾರಂಟೈನ್ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿಯ ಎಲ್ಲ 26 ಸದಸ್ಯರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಸಂಬಂಧ ಕಾರವಾರ ಉಪ ವಿಭಾಗಾಧಿಕಾರಿಗೆ ಪತ್ರ ರವಾನಿಸಿದ್ದಾರೆ. ವಿದ್ಯುತ್ ಸ್ಥಾವರದ ನಿರ್ವಹಣೆ ಕಾರ್ಯಕ್ಕೆ ಏ.30ರಂದು ಎರಡು ಕಾರುಗಳಲ್ಲಿ ಏಳು ಮಂದಿ ತಂತ್ರಜ್ಞರು ಹಾಗೂ ಇಬ್ಬರು ಚಾಲಕರು ಬಂದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ‘ಈ 9 ಮಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ ಸೋಂಕಿನ ಲಕ್ಷಣ ಕಂಡುಬಂದಿಲ್ಲ. ಸದಸ್ಯರು ತಪ್ಪು ಮಾಹಿತಿಯಿಂದ ರಾಜೀನಾಮೆ ನೀಡಿದ್ದು, ಇದು ಅನವಶ್ಯಕವಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT