ಮಂಗಳವಾರ, ಸೆಪ್ಟೆಂಬರ್ 21, 2021
27 °C

ಬೊಳ್ವೆ: ಹಲವು ಮನೆಗಳ ಗೋಡೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಕದ್ರಾ ಜಲಾಶಯದಿಂದ ಸತತವಾಗಿ ನೀರು ಬಿಡುಗಡೆ ಮಾಡಿದ ಪರಿಣಾಮ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ವೆಯಲ್ಲಿ ಹಲವು ಮನೆಗಳ ಗೋಡೆಗಳು ಕುಸಿದಿವೆ.

ಇಲ್ಲಿ ಕೃಷಿ ಚಟುವಟಿಕೆಗಳನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡವರೇ ಅಧಿಕ. 2019ರಲ್ಲಿ ಭಾರಿ ಮಳೆ ಸುರಿದು, ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿತ್ತು. ಆಗ ಕೂಡ ಹಲವು ಮನೆಗಳು ಜಲಾವೃತವಾಗಿದ್ದವು. ಈ ವರ್ಷವೂ ಅದೇ ಪರಿಸ್ಥಿತಿ ಉದ್ಭವವಾಗಿದೆ. ಈ ರೀತಿ ವರ್ಷ ವರ್ಷವೂ ಆಗುತ್ತಿದ್ದರೆ ಮುಂದಿನ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂಬ ಆತಂಕ ಸ್ಥಳೀಯರದ್ದಾಗಿದೆ. ತಮಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು