ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಮೇಲೆ ಹಲ್ಲೆಗೆ ಖಂಡನೆ

Last Updated 7 ನವೆಂಬರ್ 2019, 10:41 IST
ಅಕ್ಷರ ಗಾತ್ರ

ಕಾರವಾರ: ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಕರ್ನಾಟಕ ರಕ್ಷಣಾ ವೇದಿಕೆಯ (ಕ.ರ.ವೇ) ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದನ್ನು ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕರ ಸಂಘ ಖಂಡಿಸಿದೆ.

ಈ ಸಂಬಂಧ ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ನ.1ರಂದು ಕರ್ತವ್ಯ ನಿರತ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಸುತ್ತುವರಿದ ಕ.ರ.ವೇ ಕಾರ್ಯಕರ್ತರು ಬೆದರಿಕೆಯೊಡ್ಡಿದ್ದರು. ವೈದ್ಯರ ಮೇಲೆ ಆಗುತ್ತಿರುವ ಇಂತಹ ಹಲ್ಲೆ ಹಾಗೂ ಹಲ್ಲೆ ಯತ್ನ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಭಯದಲ್ಲೇ ಕೆಲಸ ನಿರ್ವಹಿಸುವಂತಾಗಿದೆ. ಕರ್ತವ್ಯ ನಿರತ ವೈದ್ಯರಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುವವರ ವಿರುದ್ಧ ಕಠಿಣವಾಗಿ ಶಿಕ್ಷಿಸಬೇಕು ಎಂದುಪ್ರತಿಭಟನಾಕಾರರು ಒತ್ತಾಯಿಸಿದರು.

ಇಂತಹ ವಾತಾವರಣ ಮರುಕಳಿಸದಂತೆ ಹಾಗೂಯಾವುದೇ ಒತ್ತಡಕ್ಕೆ ಒಳಗಾಗದೇ ಕೆಲಸ ಮಾಡಲು ಅವಕಾಶ ನೀಡುವಂಥ ಸನ್ನಿವೇಶಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿನ ಬೋಧಕ ಸಿಬ್ಬಂದಿ ಡಾ.ವಿ.ಎನ್.ವೆಂಕಟೇಶ್, ಡಾ.ರಾಕೇಶ್ ಎಚ್.ಎನ್, ಡಾ.ಪ್ರಮೋದ್ ಕುಮಾರ್ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT