ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ನೋಂದಣಿ ತೊಡಕು ನಿವಾರಿಸಿ

ಮನವಿ ಸಲ್ಲಿಸಿದ ಕಾರ್ಮಿಕ ಸಂಘಟನೆಗಳು
Last Updated 14 ನವೆಂಬರ್ 2019, 14:44 IST
ಅಕ್ಷರ ಗಾತ್ರ

ಶಿರಸಿ: ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ನೋಂದಣಿಗೆ ಆಗುತ್ತಿರುವ ತೊಡಕು ನಿವಾರಿಸಬೇಕು ಎಂದು ಒತ್ತಾಯಿಸಿ, ಕೆನರಾ ಬಾರ್ ಬೆಂಡಿಂಗ್ ಮತ್ತು ಸೆಂಟರಿಂಗ್ ಅಸೋಸಿಯೇಷನ್ ಹಾಗೂ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜದೂರ್ ಸಂಘಗಳ ಸ್ಥಳೀಯ ಘಟಕದ ಸದಸ್ಯರು ಗುರುವಾರ ಇಲ್ಲಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಕಾರ್ಮಿಕ ಇಲಾಖೆ ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಯಿಂದ ಬಳಲುತ್ತಿದೆ. ಪ್ರತಿ ತಾಲ್ಲೂಕಿನಲ್ಲಿ ಕಾರ್ಮಿಕ ನಿರೀಕ್ಷಕರ ಹುದ್ದೆ ಖಾಲಿಯಿದೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಧನಸಹಾಯ ನಾಲ್ಕು ವರ್ಷಗಳಿಂದ ಬಂದಿಲ್ಲ. ಮದುವೆ, ಅಂತಿಮ ಸಂಸ್ಕಾರದ ಧನಸಹಾಯ, ವೈದ್ಯಕೀಯ ಧನಸಹಾಯ ಕೂಡ ಮಂಜೂರು ಆಗಿಲ್ಲ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ತಾಂತ್ರಿಕ ಸಮಸ್ಯೆಯ ನೆಪ ಹೇಳಿ ಹೊಸ ಸದಸ್ಯತ್ವ ನೋಂದಣಿಗೆ ವಿಳಂಬ ಮಾಡಲಾಗುತ್ತಿದೆ. ಕಾರ್ಮಿಕರ ಎಲ್ಲ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಮಜದೂರ ಸಂಘದ ಅಧ್ಯಕ್ಷ ಕಮಲಾಕರ ಆಚಾರಿ, ಪ್ರಧಾನ ಕಾರ್ಯದರ್ಶಿ ಸುರೇಶ ಹೆಗಡೆ, ಕೆನರಾ ಬಾರ್ ಬೆಂಡಿಂಗ್ ಅಸೋಸಿಯೇಷನ್ ಗೌರವಾಧ್ಯಕ್ಷ ಬಾಬಣ್ಣ ಹನಮಂತಿಕರ್, ಅಧ್ಯಕ್ಷ ವೆಂಕಟೇಶ ನಾಯ್ಕ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಸಾಲೇರ, ಖಜಾಂಚಿ ಆನಂದ ಸಾಲೇರ, ಪ್ರಮುಖರಾದ ಮಲ್ಲಿಕಾರ್ಜುನ, ಪ್ರಕಾಶ, ಸುನೀಲ್, ನಿತೇಶ, ನಾಸೀರ ಖಾನ್, ಜಾನ್ ನರೋನ್ಹಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT