ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿಯಲ್ಲಿ ಹಾಲು ಪ್ಯಾಕಿಂಗ್ ಘಟಕ

ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆ
Last Updated 3 ಏಪ್ರಿಲ್ 2022, 15:56 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಹನುಮಂತಿಯಲ್ಲಿ ರಾಜ್ಯದ ಮೊದಲ ಸಾರ್ವಜನಿಕ ಖಾಸಗಿ ಸಹಭಾಗಿತ್ವದ (ಪಿಪಿಪಿ) ಅಡಿಯಲ್ಲಿ ಹಾಲು ಪ್ಯಾಕಿಂಗ್ ಘಟಕ ಸ್ಥಾಪಿಸಲಾಗಿದ್ದು, ಮಂಗಳವಾರದಿಂದ ಇದು ಕಾರ್ಯಾರಂಭ ಮಾಡಲಿದೆ.

ಧಾರವಾಡ ಹಾಲು ಒಕ್ಕೂಟ (ಧಾಮುಲ್) ಮತ್ತು ಶಿರಸಿ ಡೈರಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಒಪ್ಪಂದ ಮಾಡಿಕೊಂಡು ಈ ಘಟಕ ಸ್ಥಾಪಿಸಿವೆ. ಅಂದಾಜು ₹ 18 ಕೋಟಿ ವೆಚ್ಚದಲ್ಲಿ ಘಟಕ ನಿರ್ಮಿಸಲಾಗಿದೆ.

‘ಪ್ರತಿನಿತ್ಯ 50 ಸಾವಿರ ಲೀಟರ್ ಹಾಲು ಪ್ಯಾಕಿಂಗ್ ಮಾಡುವ ಸಾಮರ್ಥ್ಯವನ್ನು ಘಟಕ ಹೊಂದಿದೆ. ಇದನ್ನು 1 ಲಕ್ಷ ಲೀಟರ್‌ಗೆ ಏರಿಕೆ ಮಾಡಲು ಅವಕಾಶ ಇದೆ. ಕಟ್ಟಡ ನಿರ್ಮಾಣ, ಯಂತ್ರಗಳ ಅಳವಡಿಕೆ, ನಿರ್ವಹಣೆಯನ್ನು ಶಿರಸಿ ಡೈರಿ ಕಂಪನಿ ನೋಡಿಕೊಳ್ಳಲಿದೆ. ಹಾಲು ಸಂಸ್ಕರಣೆ ಮಾಡಿ, ಪ್ಯಾಕಿಂಗ್‌ ಮಾಡಲು ಸಂಸ್ಥೆಗೆ ಪ್ರತಿ ಲೀಟರ್‌ಗೆ ₹ 4.09 ಪಾವತಿಸಲಾಗುತ್ತದೆ’ ಎಂದು ಧಾಮುಲ್ ಅಧ್ಯಕ್ಷ ಶಂಕರ ಮುಗದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT