ಬುಧವಾರ, ಆಗಸ್ಟ್ 17, 2022
29 °C

ಕೃಷಿ ಸಚಿವರಿಂದ ಆತ್ಮಲಿಂಗಕ್ಕೆ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕರ್ಣ: ಕೃಷಿ ಸಚಿವ ಬಿ.ಸಿ.ಪಾಟೀಲ್ ಕುಟುಂಬ ಸಮೇತ ಬುಧವಾರ ಗೋಕರ್ಣಕ್ಕೆ ಭೇಟಿ ನೀಡಿ, ಮಹಾಬಲೇಶ್ವರನ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಬಂದಿದ್ದ ಅವರು, ಮಹಾಗಣಪತಿ ಹಾಗೂ ಮಹಾಬಲೇಶ್ವರ ದೇವಸ್ಥಾನಗಳಲ್ಲಿ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿಯನ್ನು ನೆರವೇರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಎಲ್ಲ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಮಹೇಶ ಶೆಟ್ಟಿ, ಕುಮಟಾ ಎ.ಪಿ.ಎಂ.ಸಿ. ಅಧ್ಯಕ್ಷ ರಮೇಶ ಪ್ರಸಾದ, ಸಾಮಾಜಿಕ ಕಾರ್ಯಕರ್ತ ಶಂಕರ ಗೋಪಿ, ಬಿ.ಜೆ.ಪಿ ಮುಖಂಡ ನಾಗರಾಜ ಹಿತ್ತಲಮಕ್ಕಿ, ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ನಾಯ್ಕ, ಪ್ರಭಾಕರ ಪ್ರಸಾದ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು