ಗುರುವಾರ , ಮಾರ್ಚ್ 23, 2023
31 °C

ಕೊರೊನಾ ಸೋಂಕು ಹಿನ್ನೆಲೆ: ಸಚಿವ ಹೆಬ್ಬಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲ್ಲಾಪುರ (ಉತ್ತರ ಕನ್ನಡ): ಕೋವಿಡ್‌ ದೃಢಪಟ್ಟಿದ್ದರಿಂದ ನಾಲ್ಕೈದು ದಿನಗಳಿಂದ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದರಿಂದ ಸೋಮವಾರ ಬೆಂಗಳೂರಿನ ಕೋಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ. 

ಭಾನುವಾರ ಮಧ್ಯಾಹ್ನ ಅವರ ಉಸಿರಾಟಕ್ಕೆ ತೊಂದರೆಯಾಗಿತ್ತು. ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಕಾರವಾರದ ಹೃದ್ರೋಗ ತಜ್ಞ ಡಾ.ಶ್ರೀನಿವಾಸ್ ಅವರ ಸಲಹೆಯಂತೆ ಬೆಂಗಳೂರಿಗೆ ಕರೆದೊಯ್ಯಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು