ಮಂಗಳವಾರ, ಅಕ್ಟೋಬರ್ 19, 2021
23 °C

ಶಿರಸಿ ಜಿಲ್ಲೆ ರಚನೆಗೆ ವೈಯಕ್ತಿಕ ಅಭ್ಯಂತರವಿಲ್ಲ: ಹೆಬ್ಬಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ‘ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸಲು ವೈಯಕ್ತಿಕ ಅಭ್ಯಂತರವಿಲ್ಲ. ಆದರೆ, ಹೊಸ ಜಿಲ್ಲೆ ಇಬ್ಭಾಗಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕೆ ಚರ್ಚೆಗೆ ಬಂದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಜಿಲ್ಲೆಯನ್ನು ಇಬ್ಭಾಗಿಸುವ ಮುನ್ನ ಪಕ್ಷಾತೀತವಾಗಿ ವಿವಿಧ ಕ್ಷೇತ್ರಗಳ ಪ್ರಮುಖರ ಜತೆ ಚರ್ಚೆ ನಡೆಸಬೇಕು. ಜನರ ಒಟ್ಟಾರೆ ಅಭಿಪ್ರಾಯ ಸಂಗ್ರಹವಾಗಬೇಕು. ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳ ಜತೆ ನಾನು ಈ ಕುರಿತು ಈವರೆಗೆ ಚರ್ಚಿಸಿಲ್ಲ’ ಎಂದರು.

‘ಜಿಲ್ಲೆಯಲ್ಲಿ ನನಗಿಂತ ಹಿರಿಯ ರಾಜಕಾರಣಿಗಳಿದ್ದಾರೆ. ಹೊಸ ಜಿಲ್ಲೆ ರಚನೆಗೆ ಅವರ ಅಭಿಪ್ರಾಯವೂ ಮುಖ್ಯವಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು