ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ವಿದ್ಯಾರ್ಥಿಗಳೊಂದಿಗೆ ಊಟ ಸವಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಶಿಕ್ಷಣದ ಗುಣಮಟ್ಟ ಏರಿಕೆಯೇ ಧ್ಯೇಯ ಎಂದ ಸಚಿವ
Last Updated 20 ಜುಲೈ 2022, 12:37 IST
ಅಕ್ಷರ ಗಾತ್ರ

ಶಿರಸಿ: ‘ಸರ್ಕಾರಿ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಶಿಕ್ಷಣದ ಗುಣಮಟ್ಟ ಮತ್ತಷ್ಟು ಸುಧಾರಿಸುವುದು ನಮ್ಮ ಧ್ಯೇಯವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಲ್ಲೂಕಿನ ಕಲ್ಲಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬುಧವಾರ ಭೇಟಿ ನೀಡಿದ್ದ ಅವರು ವಿದ್ಯಾರ್ಥಿಗಳೊಡನೆ ಕುಳಿತು ಊಟ ಸವಿದರು. ವಿದ್ಯಾರ್ಥಿಗಳೊಂದಿಗೆ ಶಾಲೆಯ ವ್ಯವಸ್ಥೆಯ ಕುರಿತು ವಿಚಾರಿಸಿದರು.

ವಸತಿ ಶಾಲೆಯ ಪದವಿಪೂರ್ವ ವಿಭಾಗಕ್ಕೂ ಭೇಟಿ ನೀಡಿದ ಸಚಿವರಿಗೆ ಪ್ರಯೋಗಾಲಯಕ್ಕೆ ಜಾಗ ಇಕ್ಕಟ್ಟಾಗಿರುವ ಸಮಸ್ಯೆಯನ್ನು ಸಿಬ್ಬಂದಿ ಗಮನಕ್ಕೆ ತಂದರು. ಕಟ್ಟಡ ಸೋರಿಕೆ ಸಮಸ್ಯೆಯನ್ನೂ ಪರಿಶೀಲಿಸಿದರು.

‘ಮಲೆನಾಡು ಪ್ರದೇಶಕ್ಕೆ ಸೂಕ್ತವಾಗಿರುವಂತೆ ಕಟ್ಟಡ ನಿರ್ಮಿಸಬೇಕು. ಈಗಿನ ಕಟ್ಟಡಕ್ಕೆ ಪ್ರತ್ಯೇಕ ಚಾವಣಿ ನಿರ್ಮಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಬಳಿಕ ಮಾಧ್ಯಮದವರ ಜತೆ ಮಾತನಾಡಿ, ‘ವಸತಿ ಶಾಲೆಗಳಿಗೆ ಚಿತ್ರಕಲಾ ಶಿಕ್ಷಕರ ನೇಮಕಾತಿ ಸಮಸ್ಯೆ ಬಗೆಹರಿದಿದೆ. ಪದವಿ ಶಿಕ್ಷಕರ ಸಮಸ್ಯೆ ಕೋರ್ಟ್‍ನಲ್ಲಿ ವಿಚಾರಣಾ ಹಂತದಲ್ಲಿದೆ. ನ್ಯಾಯಾಲಯದ ಪ್ರಕರಣದ ಹೊರತಾದ ವಿಷಯಗಳ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು’ ಎಂದರು.

‘ಅತಿವೃಷ್ಟಿಯಿಂದ ಉಂಟಾದ ಹಾನಿಗಳನ್ನು ಖುದ್ದು ಪರಿಶೀಲಿಸುವ ಪ್ರಯತ್ನ ನಡೆಸುತ್ತಿದ್ದೇನೆ. ಹಾನಿಗೆ ಕೇಂದ್ರದ ಮಾರ್ಗಸೂಚಿ ಆಧರಿಸಿ ನೀಡುವ ಪರಿಹಾರ ಸಾಲದು ಎಂಬುದು ಗಮನದಲ್ಲಿದೆ. ಮಾನವೀಯತೆಯ ನೆಲೆಗಟ್ಟಿನಲ್ಲಿ ಪರಿಹಾರ ಒದಗಿಸಲು ಗರಿಷ್ಠಮಟ್ಟದ ಪ್ರಯತ್ನ ಮಾಡಲಾಗುತ್ತಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಉಪವಿಭಾಗಾಧಿಕಾರಿ ದೇವರಾಜ ಆರ್., ತಹಶೀಲ್ದಾರ್ ಶ್ರೀಧರ ಮುಂದಲಮನಿ, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT