ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಾರಾಮ ಸಿದ್ದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದನೆ

Last Updated 25 ಜುಲೈ 2020, 7:46 IST
ಅಕ್ಷರ ಗಾತ್ರ

ಕಾರವಾರ: ವಿಧಾನ ಪರಿಷತ್ತಿನ ನೂತನ ನಾಮನಿರ್ದೇಶಿತ ಸದಸ್ಯ ಶಾಂತಾರಾಮ ಸಿದ್ದಿ ಅವರ ಯಲ್ಲಾಪುರ ಬಳಿಯ ಹಿತ್ಲಳ್ಳಿಯ ನಿವಾಸಕ್ಕೆ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತುಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 'ಕಾಡು ಮೇಡು, ಗುಡ್ಡ ಬೆಟ್ಟಗಳಲ್ಲಿ ಬದುಕಿ‌ ಬಾಳುತ್ತಿರುವ, ಕಾಡಿನ ಮಕ್ಕಳೆಂದೇ ಪರಿಗಣಿಸಲಾಗಿರುವ ವನವಾಸಿಗಳನ್ನು ಒಟ್ಟುಗೂಡಿಸಿ, ಆ ಜನಾಂಗದಲ್ಲಿ ರಾಷ್ಟ್ರೀಯತೆ ಮತ್ತು ರಾಷ್ಟ್ರಭಕ್ತಿಯನ್ನು ಶಾಂತರಾಮ ಸಿದ್ದಿ ಮೂಡಿಸುತ್ತಿದ್ದಾರೆ. ಅವರನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದು ನಮ್ಮ ಸರ್ಕಾರಕ್ಕೊಂದು ಹೆಮ್ಮೆ' ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಬಿ.ಜೆ.ಪಿ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT