ಮಂಗಳವಾರ, ಜನವರಿ 25, 2022
24 °C

ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಪರ ಸಚಿವ ಶಿವರಾಮ ಹೆಬ್ಬಾರ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಂಕೋಲಾ: ವಿಧಾನಪರಿಷತ್ ಚುನಾವಣೆ ಅಂಗವಾಗಿ ಸಚಿವ ಶಿವರಾಮ ಹೆಬ್ಬಾರ್ ತಾಲ್ಲೂಕಿನ ವಿವಿಧೆಡೆ ಸೋಮವಾರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರ ಪರ ಮತಯಾಚಿಸಿದರು.

ಪಟ್ಟಣದ ಗೋಕುಲ್ ರೆಸಿಡೆನ್ಸಿಯ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಸ್ಥಳೀಯ ಜನಪ್ರತಿನಿಧಿಗಳ ಪ್ರಾಬಲ್ಯ ಹೆಚ್ಚಿದೆ. ವಿಧಾನಪರಿಷತ್ ಚುನಾವಣೆಯ ಇತಿಹಾಸ ಗಮನಿಸಿದರೆ ಜಿಲ್ಲೆಯಲ್ಲಿ ಆಡಳಿತ ಪಕ್ಷದವರೇ ಗೆಲ್ಲುತ್ತಿರುವುದು ವಿಶೇಷವಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿದ್ದು ಚುನಾವಣೆಯಲ್ಲಿ ಜಯಭೇರಿ ಬಾರಿಸಲಿದೆ ಎಂದರು.

ಸಂಘಟನೆಯ ಮೇಲೆ ವಿಶ್ವಾಸವಿಟ್ಟು ನಡೆಯುತ್ತಿರುವ ಕಾರ್ಯಕರ್ತರ ಪಕ್ಷ ನಮ್ಮದು. ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದ್ದೇವೆ. ರಾಜಕೀಯದಲ್ಲಿ ಯಾವುದೇ ಕಪ್ಪುಚುಕ್ಕೆಯ ಇಲ್ಲದ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ ಎಂದರು.

ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಹೆಬ್ಬಾರ್, ಜಿಲ್ಲೆಯ ಬಹುಸಂಖ್ಯಾತ ಮೀನುಗಾರ ವರ್ಗದವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳು ಅಭ್ಯರ್ಥಿಯಾಗಿ ಗೆಲುವಿಗೆ ಮೆಟ್ಟಿಲಾಗಲಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು