ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಸ್ಥಳ ಗುರುತಿಸಿ: ರೂಪಾಲಿ ನಾಯ್ಕ

Last Updated 7 ಜುಲೈ 2020, 15:24 IST
ಅಕ್ಷರ ಗಾತ್ರ

ಕಾರವಾರ: ‘ಕೋವಿಡ್ –19ನಿಂದ ಮೃತಪಟ್ಟವರ ಅಂತ್ಯ‌ಸಂಸ್ಕಾರಕ್ಕೆ, ಸ್ಥಳೀಯರಿಗೆ ತೊಂದರೆ ಆಗದಂತೆ ಸೂಕ್ತ ಸ್ಥಳ ಗುರುತಿಸಿ’ಎಂದುಶಾಸಕಿ ರೂಪಾಲಿ ಎಸ್. ನಾಯ್ಕಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರವಿವಿಧ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಸಭೆಯಲ್ಲಿ ಅವರು ಮಾತನಾಡಿದರು.

‘ಕಾರವಾರ ಆಸ್ಪತ್ರೆಯಲ್ಲಿ ಸೋಮವಾರ ಕೋವಿಡ್ –19ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.ಇಂತಹ ಸಂದರ್ಭ ಜನರಲ್ಲಿ ಗೊಂದಲ ಸೃಷ್ಟಿಸಬಾರದು. ಸುಳ್ಳು ಸುದ್ದಿ ಹಬ್ಬಿಸಿ ಭಯ ಹುಟ್ಟಿಸಬಾರದು. ಒಂದು ವೇಳೆ ಸರ್ಕಾರದ ನಿಯಮದ ವಿರುದ್ಧ ಯಾರಾದರೂ ನಡೆದುಕೊಂಡರೆ ಕಾನೂನಿನ ಕ್ರಮ ಕೈಗೊಳ್ಳಬೇಕು’ ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಕೋವಿಡ್ –19ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಆಯಾ ತಾಲ್ಲೂಕಿನಲ್ಲಿ ಸ್ಥಳ ನಿಗದಿ ಮಾಡುವ ಬಗ್ಗೆ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು. ಜಿಲ್ಲೆಯಲ್ಲಿ ಮತ್ತೆ ಸೋಂಕಿನಿಂದಸಾವು ಸಂಭವಿಸದಿರಲಿ.ಒಂದುವೇಳೆ ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶದ ಸಮಸ್ಯೆ ಆಗದಂತೆ ನಿರ್ಜನ ಪ್ರದೇಶದಲ್ಲಿ ಜಾಗವನ್ನು ಗುರುತಿಸಬೇಕು’ ಎಂದು ಹೇಳಿದರು.

‘ಜನರಿಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ಮನವರಿಕೆ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಗುರುತಿಸಿದ ಸ್ಥಳಕ್ಕೆ ಕಾಂಪೌಂಡ್ ನಿರ್ಮಿಸಿಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು’ ಎಂದು ತಹಶೀಲ್ದಾರ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಆರ್.ವಿ.ಕಟ್ಟಿ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಆನಂದಕುಮಾರ ಬಾಲಪ್ಪನವರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT