ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಿಕೆಗೆ ಅನುಕೂಲದ ಕಟ್ಟಡ ನಿರ್ಮಿಸಿ: ಶಾಸಕಿ ರೂಪಾಲಿ

Last Updated 7 ಮೇ 2022, 15:49 IST
ಅಕ್ಷರ ಗಾತ್ರ

ಕಾರವಾರ‌: ‘ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಹೊಸದಾಗಿ ನಿರ್ಮಿಸುವ ಕಟ್ಟಡವು, ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಹಾಗೂ ನಗರದ ಅಂದವನ್ನು ಹೆಚ್ಚಿಸುವಂತೆ ಇರಬೇಕು. ಈ ನಿಟ್ಟಿನಲ್ಲಿ ನೀಲನಕ್ಷೆ ತಯಾರಿಸಬೇಕು’ ಎಂದು ಶಾಸಕಿ ರೂಪಾಲಿ ನಾಯ್ಕ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಕಾಲೇಜಿನ ಅಭಿವೃದ್ಧಿ ಬಗ್ಗೆ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಪ್ರಮುಖರೊಂದಿಗೆ ಶುಕ್ರವಾರ ಸಭೆ ನಡೆಸಿ, ಸ್ಥಳ ವೀಕ್ಷಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಅವಶ್ಯಕವಾಗಿರುವ ಪ್ರಯೋಗಾಲಯ, ತರಗತಿ ಕೊಠಡಿ, ಉದ್ಯಾನ, ಮೇಲ್ಮಹಡಿಗೆ ತೆರಳಲು ಮೆಟ್ಟಿಲು ಮತ್ತು ಲಿಫ್ಟ್ ನಿರ್ಮಿಸಬೇಕು. ಕಾಲೇಜಿನ ಹಿಂದಿನ ಆಡಳಿತ ಮಂಡಳಿಯವರು ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಳ್ಳದೆ ಕಾಮಗಾರಿ ಮಾಡಿದ್ದಾರೆ. ರೂಪುರೇಷೆ ಇಲ್ಲದೆ ಕಟ್ಟಡಗಳನ್ನು ನಿರ್ಮಿಸಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕಾಲೇಜು ನಗರದ ಕೇಂದ್ರದಲ್ಲಿದ್ದು ಮುಂದಿನ ದಿನಗಳಲ್ಲಿ ಜಾಗದ ಸಮಸ್ಯೆ ಕಾಡಬಹುದು. ಅದಕ್ಕಾಗಿ ಅಂತಸ್ತುಗಳನ್ನು ನಿರ್ಮಿಸಬೇಕು. ವಿಶೇಷವಾಗಿ ಕರಾವಳಿ ಭಾಗಕ್ಕೆ ಹೊಂದಿಕೆಯಾಗುವಂಥ ವಿನ್ಯಾಸವಿರಬೇಕು’ ಎಂದು ನಿರ್ದೇಶನ ನೀಡಿದರು.

ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ರಾಜೇಶ್ ನಾಯ್ಕ, ಜಗದೀಶ ಬಿರ್ಕೋಡಿಕರ್‌, ಅರುಣ ಸಾಳುಂಕೆ, ಉಪನ್ಯಾಸಕರು ಇದ್ದರು. ಬಳಿಕ, ನಗರದ ಶಾಸಕರ ಮಾದರಿ ಶಾಲೆ, ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿದ ಅವರು, ‘ನಗರದ ಕೇಂದ್ರ ಭಾಗದಲ್ಲಿರುವ ಸರ್ಕಾರಿ ಶಾಲೆ ಅಭಿವೃದ್ಧಿ ಮುಖ್ಯ. ಕಟ್ಟಡಗಳು ಹಳೆಯದಾಗಿದ್ದು, ಹೊಸದಾಗಿ ನಿರ್ಮಾಣ ಮಾಡಬೇಕಿದೆ’ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹರೀಶ ಗಾಂವ್ಕರ್ ಹಾಗೂ ಇತರ ಅಧಿಕಾರಿಗಳಿದ್ದರು.

----

* ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ ಗಮನಕ್ಕೆ ಬಂದಿದೆ. ಈ ಸಮಸ್ಯೆಯನ್ನು ಪರಿಹರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ‌.

- ರೂಪಾಲಿ ನಾಯ್ಕ, ಶಾಸಕಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT