ಬುಧವಾರ, ಸೆಪ್ಟೆಂಬರ್ 28, 2022
26 °C

‘ರಾಷ್ಟ್ರಧ್ವಜಕ್ಕೆ ಅಪಮಾನವಾಗದಂತೆ ಎಚ್ಚರಿಕೆ ವಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ‘ಆ.13ರಿಂದ 15ರವರೆಗೆ ನಡೆಯುವ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜಾರೋಹಣ ಅಭಿಯಾನದಲ್ಲಿ  ರಾಷ್ಟ್ರಧ್ವಜಕ್ಕೆ ಅಪಮಾನವಾಗದಂತೆ ಸಾರ್ವಜನಿಕರು ಹಾಗೂ ಅಧಿಕಾರಿ ವರ್ಗ ಎಚ್ಚರಿಕೆ ವಹಿಸಬೇಕು’ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಸೂಚನೆ ನೀಡಿದ್ದಾರೆ.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ದೇಶಾಭಿಮಾನದ ಸಂಕೇತವಾಗಿ ಪ್ರತಿಯೊಬ್ಬರೂ ರಾಷ್ಟ್ರಧ್ವಜಕ್ಕೆ ಗೌರವ ಕೊಡುವ ಉದ್ದೇಶದಿಂದ ಅಭಿಯಾನ ನಡೆಸಲಾಗುತ್ತಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಹಶೀಲ್ದಾರ್ ಕಚೇರಿಯಿಂದ ಹಾಗೂ ಆಸಕ್ತ ಅಭಿಮಾನಿಗಳಿಂದ ರಾಷ್ಟ್ರಧ್ವಜ ವಿತರಣೆಗೆ ಕಾರ್ಯ ಯೋಜನೆ ರೂಪಿಸಲಾಗಿದೆ’ ಎಂದರು.

‘ನಗರ ಪ್ರದೇಶದಲ್ಲಿ ನಗರಸಭೆ ಅಧಿಕಾರಿಗಳಿಗೆ, ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೆ ರಾಷ್ಟ್ರಧ್ವಜವನ್ನು ವಿತರಿಸುವ ಜವಾಬ್ದಾರಿ ನೀಡಲಾಗಿದೆ. ಸಂಬಂಧಪಟ್ಟವರು ಪ್ರತಿಯೊಬ್ಬರಿಗೂ ಗೌರವಯುತವಾಗಿ ರಾಷ್ಟ್ರಧ್ವಜ ತಲುಪಿಸಬೇಕು. ಜನರಿಗೆ ರಾಷ್ಟ್ರಧ್ವಜ ಸಂಹಿತೆಯ ಅರಿವು ಮೂಡಿಸಬೇಕು’ ಎಂದು ನಿರ್ದೇಶನ ನೀಡಿದರು.

ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪ್ರಕಾಶ ನಾಯ್ಕ, ತಹಶೀಲ್ದಾರ್ ನಿಶ್ಚಲ್ ನರೋನಾ, ತಾ.ಪಂ ಇ.ಒ ಬಾಲಪ್ಪನವರ ಆನಂದ ಕುಮಾರ, ನಗರಸಭೆ ಆಯುಕ್ತ ಆರ್.ಪಿ.ನಾಯ್ಕ, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ರಾಮದಾಸ್ ನಾಯ್ಕ, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು