ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ 87.27ರಷ್ಟು ಮತದಾನ

ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ
Last Updated 13 ಜೂನ್ 2022, 16:00 IST
ಅಕ್ಷರ ಗಾತ್ರ

ಕಾರವಾರ: ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸೋಮವಾರ ನಡೆದ ಮತದಾನವು ಗೊಂದಲವಿಲ್ಲದೇ ನೆರವೇರಿತು. ಜಿಲ್ಲೆಯಲ್ಲಿ ಒಟ್ಟು ಶೇ 87.27ರಷ್ಟು ಮತದಾನವಾಗಿದೆ. ಮತ ಎಣಿಕೆಯು ಜೂನ್ 15ರಂದು ನಡೆಯಲಿದೆ.

ಜಿಲ್ಲೆಯ ಒಟ್ಟು 15 ಮತಗಟ್ಟೆಗಳಲ್ಲಿ ಬೆಳಿಗ್ಗೆ 8ಕ್ಕೆ ಆರಂಭವಾದ ಮತದಾನವು ಸಂಜೆ 5ಕ್ಕೆ ಮುಕ್ತಾಯವಾಯಿತು. ಬೆಳಿಗ್ಗೆ ನಿಧಾನಗತಿಯಲ್ಲಿದ್ದರೂ ಮಧ್ಯಾಹ್ನದ ವೇಳೆಗೆ ಚುರುಕಾಗಿ ಪ್ರಗತಿ ಕಂಡಿತು. ಈ ವೇಳೆಯಲ್ಲಿ ಮಳೆಯೂ ಬಿಡುವು ನೀಡಿದ್ದು ಹಕ್ಕು ಚಲಾಯಿಸಲು ಬರುವ ಶಿಕ್ಷಕರಿಗೆ ಅನುಕೂಲವಾಯಿತು. ಒಟ್ಟು 3,605 ಮತದಾರರಲ್ಲಿ 3,146 ಮತದಾರರು ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದರು.

ಕಾರವಾರ, ಜೊಯಿಡಾ, ಯಲ್ಲಾಪುರ, ಅಂಕೋಲಾ, ಕುಮಟಾ, ಭಟ್ಕಳ, ಶಿರಸಿ, ಮುಂಡಗೋಡ ಮತ್ತು ಹಳಿಯಾಳದ ತಹಶೀಲ್ದಾರ್ ಕಚೇರಿಗಳಲ್ಲಿ ಮತಗಟ್ಟೆಗಳನ್ನು ತೆರೆಯಲಾಗಿತ್ತು.

ಉಳಗಾದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರಾಮನಗರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆ, ಗೋಕರ್ಣದ ಗ್ರಾಮ ಲೆಕ್ಕಿಗರ ಕಚೇರಿಯಲ್ಲಿ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ಹೊನ್ನಾವರದ ಪ್ರಭಾತ್ ನಗರ ಸರ್ಕಾರಿ ಪ್ರೌಢಶಾಲೆ, ಸಿದ್ದಾಪುರದ ತಾಲ್ಲೂಕು ಆಡಳಿತ ಸೌಧ ಹಾಗೂ ದಾಂಡೇಲಿಯ ನಗರಸಭೆ ಕಚೇರಿಯ ಮತಗಟ್ಟೆಗಳಲ್ಲಿ ಮತದಾನ ಮಾಡಲಾಯಿತು.

ಉಳಗಾ ಮತಗಟ್ಟೆಯಲ್ಲಿ ಅತಿ ಕಡಿಮೆ ಶೇ 64.94ರಷ್ಟು, ದಾಂಡೇಲಿ ನಗರಸಭೆ ಮತಗಟ್ಟೆಯಲ್ಲಿ ಅತಿ ಹೆಚ್ಚು ಶೇ 93.68ರಷ್ಟು ಮತದಾನ ದಾಖಲಾಯಿತು.

ಮತಗಟ್ಟೆಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆಯಾಗಿ ಮತದಾರರರ ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು. ಪರಸ್ಪರ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಲಾಯಿತು.

ಚಲಾವಣೆಯಾದ ಮತಗಳು:

ಪುರುಷರು: 1,841 (91.05%)

ಮಹಿಳೆಯರು: 1,305 (82.44%)

ಟ್ಟು: 3,146 (87.27%).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT