ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೌಢಶಾಲೆ ದತ್ತು ಪಡೆದ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್

Last Updated 8 ಆಗಸ್ಟ್ 2022, 15:56 IST
ಅಕ್ಷರ ಗಾತ್ರ

ಕಾರವಾರ: ತಾಲ್ಲೂಕಿನ ಮುದಗಾ ಸೀಬರ್ಡ್ ಕಾಲೊನಿಯಲ್ಲಿರುವ ಜನತಾ ವಿದ್ಯಾಲಯವನ್ನು ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ದತ್ತು ಸ್ವೀಕರಿಸಿದ್ದಾರೆ. ಈ ಪ್ರೌಢಶಾಲೆಯು 60 ವರ್ಷ ಪೂರೈಸುತ್ತಿದ್ದು, ಭೌತಿಕ ಮತ್ತು ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸಿ ಮಾದರಿ ಶಾಲೆಯನ್ನಾಗಿ ಮಾಡಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ವಿದ್ಯಾಲಯಕ್ಕೆ ಸೋಮವಾರ ಭೇಟಿ ನೀಡಿ, ಶಾಲಾ ಸಂಸತ್ತು ಮತ್ತು ವಿವಿಧ ಸಂಘಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದಿನಕರ ದೇಸಾಯಿ ಅವರ ಆದರ್ಶದೊಂದಿಗೆ ಪ್ರಾರಂಭವಾದ ಈ ಶಾಲೆಯು ಮೀನುಗಾರರ ಸಮುದಾಯದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರಗಳನ್ನು ನೀಡುತ್ತಿದೆ. ಇನ್ನುಮುಂದೆ ಈ ಶಾಲೆಗೆ ಪ್ರತಿ ತಿಂಗಳು ಭೇಟಿ ನೀಡಿ, ಇಲ್ಲಿನ ಕುಂದುಕೊರತೆಗಳನ್ನು ಪರಿಹರಿಸಲಾಗುವುದು’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಬದುಕಿನಲ್ಲಿ ನಿಶ್ಚಿತ ಗುರಿ, ಸತತ ಅಭ್ಯಾಸ, ಏಕಾಗ್ರತೆ ಅಗತ್ಯ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರಬೇಕು’ ಎಂದು ಪ್ರಮಾಣ ವಚನ ಬೋಧಿಸಿದರು. ಶಾಲಾ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಧ್ವಜಗಳನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಉಮಾಕಾಂತ ಹರಿಕಂತ್ರ ಮಾತನಾಡಿ, ‘ಶಾಲೆಯ ಮೂಲಸೌಕರ್ಯಗಳ ಹೆಚ್ಚಿಸುವಲ್ಲಿ ದಾನಿಗಳ ಸಹಕಾರ ಅಗತ್ಯವಾಗಿದೆ’ ಎಂದರು.

ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ ನಾಯ್ಕ, ಉಪಾಧ್ಯಕ್ಷ ರವಿ ದುರ್ಗೇಕರ್, ಶಿಕ್ಷಕ ಜೈರಂಗನಾಥ ಇದ್ದರು. ಶಿಕ್ಷಕಿ ಸ್ಮಿತಾ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ನಿಕಿತಾ ನಾಯ್ಕ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT