ಸಿಇಟಿ: ಮೊಬೈಲ್, ಕೈಗಡಿಯಾರಕ್ಕೆ ನಿಷೇಧ

ಶುಕ್ರವಾರ, ಮೇ 24, 2019
30 °C
ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿರುವ 3,054 ವಿದ್ಯಾರ್ಥಿಗಳು

ಸಿಇಟಿ: ಮೊಬೈಲ್, ಕೈಗಡಿಯಾರಕ್ಕೆ ನಿಷೇಧ

Published:
Updated:

ಕಾರವಾರ: ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಏ.29 ಮತ್ತು 30ರಂದು 3,054 ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಫೋನ್ ಹಾಗೂ ಕೈಗಡಿಯಾರವನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಸೂಚಿಸಿದ್ದಾರೆ. 

ಸಿಇಟಿ ಪರೀಕ್ಷೆ ಸಿದ್ಧತೆಗಳ ಕುರಿತು ಗುರುವಾರ ಹಮ್ಮಿಕೊಳ್ಳಲಾದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರತಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರವನ್ನು ಅಳವಡಿಸಬೇಕು. ಅಲ್ಲದೇ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಕೈಗಡಿಯಾರವನ್ನು ಇಡಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದು ಅವರು ತಿಳಿಸಿದರು.

ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಬಂಧಿಕರನ್ನು ಆಯಾ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಬಾರದು. ಪರೀಕ್ಷಾ ಮೇಲ್ವಿಚಾರಕರು ಸಹ ಮೊಬೈಲ್ ಫೋನ್‌ ಅನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯಬಾರದು. ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತರಬೇಕು. ಕೊಠಡಿ ಹೊರಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂಗೆ ಸೂಚಿಸಬೇಕು ಎಂದರು.

ಪರೀಕ್ಷಾ ಮೇಲುಸ್ತುವಾರಿಗೆ ಪ್ರತಿ ಕೇಂದ್ರಕ್ಕೆ ಮೂವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಪ್ರತಿ ಕೇಂದ್ರದಲ್ಲಿ ಒಬ್ಬರು ವೀಕ್ಷಕರನ್ನು ನಿಯೋಜಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ಸಾಗಣೆ ಸಂದರ್ಭ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪರೀಕ್ಷಾ ಕೇಂದ್ರಗಳು: ಕಾರವಾರದ ಸರ್ಕಾರಿ ಪಿ.ಯು ಕಾಲೇಜು, ಸದಾಶಿವಗಡದ ಶಿವಾಜಿ ಪಿ.ಯು ಕಾಲೇಜು, ಶಿರಸಿಯ ಎಂ.ಇ.ಎಸ್ ಪಿ.ಯು ಕಾಲೇಜು, ಕುಮಟಾದ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜು, ಕುಮಟಾ ನೆಲ್ಲಿಕೇರಿಯ ಸರ್ಕಾರಿ ಪಿ.ಯು ಕಾಲೇಜು, ಶಿರಸಿಯ ಮಾರಿಕಾಂಬಾ ಸರ್ಕಾರಿ ಪಿ.ಯು ಕಾಲೇಜು ಮತ್ತು ದಾಂಡೇಲಿಯ ಬಂಗೂರು ನಗರ್ ಪಿ.ಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ. 

ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಜಿ.ಪೋಳ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಬಸವರಾಜ ಬಡಿಗೇರ, ತಹಶೀಲ್ದಾರರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !