ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗನ ಕಾಯಿಲೆ : ವ್ಯಕ್ತಿ ಸಾವು

Last Updated 29 ಫೆಬ್ರುವರಿ 2020, 19:27 IST
ಅಕ್ಷರ ಗಾತ್ರ

ಸಿದ್ದಾಪುರ (ಉತ್ತರ ಕನ್ನಡ): ಮಂಗನ ಕಾಯಿಲೆ(ಕೆಎಫ್‌ಡಿ)ಯಿಂದ ತಾಲ್ಲೂಕಿನ ಹೊನ್ನೇಘಟಕಿ ಸಮೀಪದ ಮಳಗುಳಿಯ ಭಾಸ್ಕರ ಗಣಪತಿ ಹೆಗಡೆ (64) ಎಂಬುವರು ಶುಕ್ರವಾರ ಮೃತಪಟ್ಟಿದ್ದಾರೆ.

ತಾಲ್ಲೂಕಿನಲ್ಲಿ ಈ ವರ್ಷ ಮಂಗನ ಕಾಯಿಲೆಯಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ನಂತರ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟರು.

‘ಸಿದ್ದಾಪುರದಲ್ಲಿ ಇಬ್ಬರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ. ಅವರಲ್ಲಿ ಒಬ್ಬರು ಮೃತಪಟ್ಟಿದ್ದು, ಇನ್ನೊಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಭಾಗದಲ್ಲಿ ಇತ್ತೀಚೆಗೆ ಸತ್ತಿರುವ ಒಂದು ಮಂಗನ ದೇಹದಲ್ಲಿ ಈ ವೈರಾಣು ಇರುವುದು ದೃಢಪಟ್ಟಿತ್ತು. ಇಲಾಖೆ ಎಲ್ಲ ಮುನ್ನೆಚ್ಚರಿಕೆ ಕೈಗೊಂಡಿದೆ. ಸಾಕಷ್ಟು ಲಸಿಕೆ ಸಂಗ್ರಹವಿದೆ. ಈ ಹಿಂದೆಯೇ ಲಸಿಕೆ ಹಾಕಿಸಿಕೊಳ್ಳುವಂತೆ ವಿನಂತಿಸಿದರೂ, ಜನರು ಅಷ್ಟಾಗಿ ಆಸಕ್ತಿ ತೋರಲಿಲ್ಲ. ಜನರಲ್ಲಿ ತಿಳಿವಳಿಕೆ ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕುಕುಮಾರ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT