ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಟಾ: ಕಾಲೇಜಿನಲ್ಲಿ ಬಳಸುತ್ತಿದ್ದ 200 ಮೊಬೈಲ್ ವಶ

Last Updated 12 ನವೆಂಬರ್ 2021, 14:18 IST
ಅಕ್ಷರ ಗಾತ್ರ

ಕುಮಟಾ: ಪಟ್ಟಣದ ಹನುಮಂತ ಬೆಣ್ಣೆ ನೆಲ್ಲಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೂರ್ವಾನುಮತಿ ಇಲ್ಲದೆ ತರಗತಿಯೊಳಗೆ ವಿದ್ಯಾರ್ಥಿಗಳು ತಂದಿದ್ದ ಸುಮಾರು 200ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ಅಧ್ಯಾಪಕರ ತಂಡ ಗುರುವಾರ ವಶಪಡಿಸಿಕೊಂಡು ಎಚ್ಚರಿಕೆ ನೀಡಿದೆ.

ಪಾಲಕರನ್ನು ಕರೆಸಿ, ವಿದ್ಯಾರ್ಥಿಗಳಿಗೆ ತಿಳಿ ಹೇಳಿದ ನಂತರ ಮೊಬೈಲ್‌ಗಳನ್ನು ವಾಪಸ್‌ ನೀಡಲಾಗಿದೆ.

ಪ್ರಾಚಾರ್ಯ ಸತೀಶ ನಾಯ್ಕ ಮಾಹಿತಿ ನೀಡಿ, ‘ವಿದ್ಯಾರ್ಥಿಗಳು ಗುಟ್ಟಾಗಿ ಮೊಬೈಲ್ ಫೋನ್‌ಗಳನ್ನು ತರಗತಿ ಸಮಯದಲ್ಲಿ ಬಳಸುತ್ತಿದ್ದರು. ಎಚ್ಚರಿಕೆ ನೀಡಿದ್ದರೂ ಮುಂದುವರಿಸಿದ್ದರು. ಗುರುವಾರ ವಾಣಿಜ್ಯ ವಿಭಾಗ ತರಗತಿಯಲ್ಲಿ ಅಧ್ಯಾಪಕರು ಪರಿಶೀಲನೆ ನಡೆಸಿದಾಗ ಸುಮಾರು 200 ಮೊಬೈಲ್‌ಗಳು ಸಿಕ್ಕವು. ದೂರದಿಂದ ಕಾಲೇಜಿಗೆ ಬರುವ ಕೆಲವು ವಿದ್ಯಾರ್ಥಿನಿಯರಿಗೆ ತೊಂದರೆ ಆದರೆ ಸಂಪರ್ಕಕ್ಕೆ ಅನುಕೂಲ ಆಗಲಿ ಎನ್ನುವ ಉದ್ದೇಶದಿಂದ ಅವರಿಗೆ ಅನುಮತಿ ನೀಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT