ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡಗೋಡ: ಮೆಡಿಕಲ್ ಕಿಟ್ ನೀಡಲು ವರ್ತಕರ ನಿರ್ಧಾರ

Last Updated 18 ಮೇ 2021, 16:04 IST
ಅಕ್ಷರ ಗಾತ್ರ

ಮುಂಡಗೋಡ: ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರಿಗೆ ಹಾಗೂ ‘ಕೋ ಮಾರ್ಬಿಡ್’ (ರಕ್ತದೊತ್ತಡ, ಮಧುಮೇಹ) ಕಾಯಿಲೆಯಿಂದ ಬಳಲುತ್ತಿರುವರಿಗೆ ಇಲ್ಲಿನ ವ್ಯಾಪಾರಸ್ಥರು ಸ್ವಂತ ಖರ್ಚಿನಿಂದ ಮೆಡಿಕಲ್ ಕಿಟ್ ನೀಡಲು ನಿರ್ಧರಿಸಿದರು.

ತಹಶೀಲ್ದಾರ್ ಶ್ರೀಧರ ಮುಂದಲಮನಿ ನೇತೃತ್ವದಲ್ಲಿ ಸೋಮವಾರ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ಈ ತೀರ್ಮಾನವನ್ನು ಪ್ರಕಟಿಸಿದರು.

ಕೋವಿಡ್ ಪರೀಕ್ಷೆ ಮಾಡಿದ ನಂತರ ವರದಿ ಬರಲು 2– 3 ದಿನಗಳು ಬೇಕಾಗುತ್ತವೆ. ಅಲ್ಲಿಯವರೆಗೆ ಸೋಂಕಿನ ಲಕ್ಷಣ ಇಲ್ಲದಿದ್ದರೂ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಆಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ವಿಟಮಿನ್ ಸಿ, ಡೊಲೊ 650, ಜಿಂಕ್, ಐವರ್‌ಮೆಕ್ಟಿನ್, ಲಿವೊ ಸಿಟ್ರಿಜನ್ ಮಾತ್ರೆಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತಿದೆ ಎಂದು ವ್ಯಾಪಾರಸ್ಥರು ತಿಳಿಸಿದರು.

‘ಆರಂಭಿಕವಾಗಿ 4,000 ಮೆಡಿಕಲ್ ಕಿಟ್‌ಗಳನ್ನು ಸಿದ್ಧಪಡಿಸಬಹುದು. ಕೋವಿಡ್ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳು, ಕಂಟೈನ್‌ಮೆಂಟ್ ವಲಯಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು. ಮೆಡಿಕಲ್ ಸಂಘದವರು 30,000 ಡೊಲೊ 650 ಮಾತ್ರೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ತಹಶೀಲ್ದಾರ್ ಶ್ರೀಧರ ಮುಂದಲಮನಿ ಹೇಳಿದರು.

ತಹಶೀಲ್ದಾರ್‌, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್, ತಾಲ್ಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಚ್.ಎಫ್.ಇಂಗಳೆ, ಸಿ.ಪಿ.ಐ ಪ್ರಭುಗೌಡ ಕಿರೇದಳ್ಳಿ, ಮುಖ್ಯಾಧಿಕಾರಿ ಸಂಗನಬಸಯ್ಯ ಒಟ್ಟು ₹ 50 ಸಾವಿರ ಧನಸಹಾಯ ಮಾಡುವುದಾಗಿಯೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT