ಸೋಮವಾರ, ನವೆಂಬರ್ 30, 2020
24 °C

‘ನಮ್ಮನೆ ಪುರಸ್ಕಾರ’ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ವಿಶ್ವಶಾಂತಿ ಸೇವಾ ಟ್ರಸ್ಟ ಕರ್ನಾಟಕ ನೀಡುವ ‘ನಮ್ಮನೆ ಪುರಸ್ಕಾರ’ಕ್ಕೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸಾಗರ ತಾಲ್ಲೂಕಿನ ಬಿಳಿಯೂರಿನ ಸಂಜಯಕುಮಾರ, ಸಿದ್ದಾಪುರ ತಾಲ್ಲೂಕಿನ ನಾಣಿಕಟ್ಟ ಸಮೀಪದ ಗೋರ್ನಮನೆಯ ನಾಗಪತಿ ಹೆಗಡೆ ಹಾಗೂ ಯುವ ಕ್ರೀಡಾಪಟು ಶಿರಸಿಯ ರಕ್ಷಿತ್ ರವಿಂದ್ರ ನಾಯ್ಕ ಆಯ್ಕೆಯಾಗಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಟ್ರಸ್ಟ್‌ನ ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ, ‘ಪ್ರಶಸ್ತಿಯನ್ನು ಶಿರಸಿ ಬೆಟ್ಟಕೊಪ್ಪದಲ್ಲಿ ಡಿಸೆಂಬರ್ 13ರಂದು ಪ್ರದಾನ ಮಾಡಲಾಗುವುದು. ಈ ಸಮಾರಂಭಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ, ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ, ವಿ.ಉಮಾಕಾಂತ ಭಟ್ಟ ಕೆರೇಕೈ ಅವರನ್ನು ಆಹ್ವಾನಿಸಲಾಗಿದೆ. ಅಧ್ಯಕ್ಷತೆಯನ್ನು ಟ್ರಸ್ಟನ ಅಧ್ಯಕ್ಷೆ, ಹಿರಿಯ ಸಾಹಿತಿ ಭುವನೇಶ್ವರಿ ಹೆಗಡೆ ವಹಿಸಿಕೊಳ್ಳಲಿದ್ದಾರೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.