ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನತೆಗೆ ಹೋರಾಡಿದ ದಾರ್ಶನಿಕ ನಾರಾಯಣ ಗುರು

Last Updated 10 ಸೆಪ್ಟೆಂಬರ್ 2022, 15:09 IST
ಅಕ್ಷರ ಗಾತ್ರ

ಕಾರವಾರ: ‘ನಾರಾಯಣ ಗುರುಗಳು ಜಾತಿ, ಲಿಂಗ, ಧರ್ಮ ಆಧಾರದ ತಾರತಮ್ಯದ ವಿರುದ್ಧ ಜೀವನ ಪರ್ಯಂತ ಹೋರಾಡಿದರು. ಸ್ತ್ರೀ ಸಮಾನತೆ, ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದರು. ಅವರ ಜೀವನ ಚಿತ್ರಣವನ್ನು ನಾವು ತಿಳಿದುಕೊಳ್ಳಬೇಕು’ ಎಂದು ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ ಹೇಳಿದರು.

ನಗರದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಸ್ಪೃಶ್ಯತೆ, ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ನಡೆಯುವ ಮೂಢ ಆಚರಣೆಗಳನ್ನು ಹೋಗಲಾಡಿಸಲು, ಸ್ತ್ರೀಸ್ವಾತಂತ್ರ್ಯ, ಸಮಾನತೆಗಾಗಿ ಜೀವನ ಪರ್ಯಂತ ಶ್ರಮಿಸಿದರು’ ಎಂದು ಅವರು ಹೇಳಿದರು.

ಉಪನ್ಯಾಸಕ ಸತೀಶ ನಾಯ್ಕ ಮಾತನಾಡಿ, ‘ನಾರಾಯಣ ಗುರುಗಳು ಒಂದೇ ಮತ, ಒಂದೇ ಜಾತಿ, ಒಂದೇ ದೇವರು ಎಂದು ಹೇಳಿದ್ದು, ಎಲ್ಲರ ಆತ್ಮದಲ್ಲೂ ಪರಮಾತ್ಮನಿದ್ದಾನೆ ಎಂದು ಸರ್ವಧರ್ಮ ಸಮನ್ವಯತೆ ಸಾರಿದ್ದಾರೆ’ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಉಪಾಧ್ಯಕ್ಷ ಪ್ರಕಾಶ ನಾಯ್ಕ ವಹಿಸಿದ್ದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸುಜಾತಾ ಥಾಮ್ಸೆ, ಗ್ರೇಡ್ 2 ತಹಶೀಲ್ದಾರ್ ಶ್ರೀದೇವಿ ಭಟ್, ನಾಮಧಾರಿ ಸಮುದಾಯದ ಮುಖಂಡ ಎನ್.ಜಿ.ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ರಾಮ ನಾಯ್ಕ, ಉದ್ಯಮಿ ಸುನೀಲ್ ಸೋನಿ, ಶಿಕ್ಷಕ ಗಣೇಶ ಬಿಷ್ಟಣ್ಣನವರ, ತಾಲ್ಲೂಕು ಪಂಚಾಯತ ಸಿಬ್ಬಂದಿ, ನಗರಸಭೆ ಸದಸ್ಯರು ಹಾಗೂ ಅಸ್ನೋಟಿ ಶಿವಾಜಿ ವಿದ್ಯಾಮಂದಿರದ ವಿದ್ಯಾರ್ಥಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT