ಶುಕ್ರವಾರ, ನವೆಂಬರ್ 22, 2019
19 °C

ನೇತ್ರಾವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಬಂಧನ

Published:
Updated:
Prajavani

ಹೊನ್ನಾವರ: ತಾಲ್ಲೂಕಿನ ಕಾಸರಕೋಡಿನಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದ ನೇತ್ರಾವತಿ ಅಂಬಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿಮಲಾ ನಾಯ್ಕ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅವರು ಅದೇ ಗ್ರಾಮದ ಪಂಚಾಯ್ತಿ ಸದಸ್ಯೆಯಾಗಿದ್ದಾರೆ.

ವಿಮಲಾ ನಾಯ್ಕ ಬಡ್ಡಿ ಹಣ ಕೊಡುವಂತೆ ಪೀಡಿಸಿದ್ದರಿಂದ ನೇತ್ರಾವತಿ ಆತ್ಮಹತ್ಯೆ ಮಾಡಿಕೊಂಡರು ಎಂದು ದೂರು ದಾಖಲಾಗಿತ್ತು. ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಎರಡು ಬಾರಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಪ್ರಕರಣದ ಎರಡನೇ ಆರೋಪಿ ಮಂಗಲಾ ನಾಯ್ಕ ಎನ್ನುವವರನ್ನು ಈ ಮೊದಲೇ ಬಂಧಿಸಲಾಗಿತ್ತು. 

ಪ್ರತಿಕ್ರಿಯಿಸಿ (+)