ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ರೈತರಿಗೆ ಸ್ವಾತಂತ್ರ್ಯ ನೀಡಿದ ಕೃಷಿ ಕಾಯ್ದೆ: ಹೆಬ್ಬಾರ

Last Updated 6 ಸೆಪ್ಟೆಂಬರ್ 2021, 9:09 IST
ಅಕ್ಷರ ಗಾತ್ರ

ಶಿರಸಿ: ಕೃಷಿಕರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ನಿರ್ಧರಿಸುವ ಸ್ವಾತಂತ್ರ್ಯವನ್ನು ಹೊಸ ಕೃಷಿ ಕಾಯ್ದೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಪ್ರತಿಪಾದಿಸಿದರು.

ತಾಲ್ಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯ ಸಭಾಂಗಣದಲ್ಲಿ ಭಾನುವಾರ ಬಿಜೆಪಿ ತಾಲ್ಲೂಕು ಘಟಕ ಆಯೋಜಿಸಿದ್ದ ನೂತನ ಕೃಷಿ ಕಾಯ್ದೆ ಸತ್ಯ-ಮಿಥ್ಯೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರೈತರಿಗೆ ಬೇಕಿರುವ ಮೂಲಸೌಲಭ್ಯ ಒದಗಿಸಿದರೆ ದೇಶ ಅಭಿವೃದ್ಧಿಯಾಗಲಿದೆ. ಅದನ್ನು ಕೇಂದ್ರಿಕರಿಸಿ ಕೇಂದ್ರ ಸರ್ಕಾರ ರೈತಪರ ಕಾಯ್ದೆ ರೂಪಿಸಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್, ‘ದಲ್ಲಾಳಿಗಳ ಹಾವಳಿ ನಿಯಂತ್ರಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಹೊಸ ಕೃಷಿ ನೀತಿ ಅನುಕೂಲವಾಗಿದೆ. ಆದರೆ, ಕಾಯ್ದೆ ವಿರೋಧಿಸಿ ದಲ್ಲಾಳಿಗಳ ಪರವಾಗಿರುವ ತಂಡದವರುಹೋರಾಡುತ್ತಿದ್ದಾರೆ’ ಎಂದು ಟೀಕಿಸಿದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಾ.ಕ.ರ.ಸಾ.ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ್, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ ಹೊಸಕೊಪ್ಪ, ಪ್ರಮುಖರಾದ ನರಸಿಂಹ ಹೆಗಡೆ ಬಕ್ಕಳ, ಚಂದ್ರು ಎಸಳೆ, ನಾಗರಾಜ ನಾಯಕ ತೊರ್ಕೆ, ಉಷಾ ಹೆಗಡೆ, ಪ್ರಶಾಂತ ಗೌಡರ್, ಗೋಪಾಲಕೃಷ್ಣ ವೈದ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT