ಮಂಗಳವಾರ, ಸೆಪ್ಟೆಂಬರ್ 27, 2022
27 °C

ಉಗ್ರ ಸಂಘಟನೆ ಜೊತೆ ನಂಟಿನ ಶಂಕೆ: ಭಟ್ಕಳದಲ್ಲಿ ಎನ್‌ಐಎ ದಾಳಿ, ಒಬ್ಬನ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಟ್ಕಳ: ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಅಧಿಕಾರಿಗಳು, ಭಾನುವಾರ ನಸುಕಿನಲ್ಲಿ ಪಟ್ಟಣದ ಮನೆಯೊಂದರ ಮೇಲೆ ದಾಳಿ ಮಾಡಿದ್ದಾರೆ. ಉಗ್ರ ಸಂಘಟನೆಗಳ ಜೊತೆ ನಂಟು ಹೊಂದಿರುವ ಶಂಕೆಯಲ್ಲಿ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಶಕ್ಕೆ ಪಡೆದಿರುವ ಆರೋಪಿಯನ್ನು ಅಬ್ದುಲ್ ಮುಕ್ತದೀರ್ ಎಂಬುವವರನ್ನು ಗುರುತಿಸಲಾಗಿದೆ. ಆತನ ಸಹೋದರನನ್ನೂ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಭಾನುವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ, ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ದಾಳಿ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈತ ಭಟ್ಕಳ ಪಟ್ಟಣದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು