ಭಾನುವಾರ, ಆಗಸ್ಟ್ 1, 2021
28 °C

ಕೋವಿಡ್‌ನಿಂದ ಒಂಬತ್ತು ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಕೋವಿಡ್ 19ನಿಂದ ಗುಣಮುಖರಾದ ಒಂಬತ್ತು ಮಂದಿಯನ್ನು ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ (ಕ್ರಿಮ್ಸ್) ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಸದ್ಯ ಆಸ್ಪತ್ರೆಯಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸುಧಾರಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 84 ಸೋಂಕಿತರು ‘ಕ್ರಿಮ್ಸ್’ಗೆ ದಾಖಲಾಗಿದ್ದು, ಈವರೆಗೆ 70 ಮಂದಿ ಸಂಪೂರ್ಣವಾಗಿ ಸೋಂಕುಮುಕ್ತರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದವರ ಪೈಕಿ ನಾಲ್ವರು ಕುಮಟಾದವರು, ತಲಾ ಇಬ್ಬರು ಶಿರಸಿ ಮತ್ತು ಸಿದ್ದಾಪುರದವರು ಹಾಗೂ ಹಳಿಯಾಳದ ನಾಲ್ಕು ವರ್ಷದ ಬಾಲಕ ಸೇರಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಎರಡು ದಿನಗಳಿಂದ ಕೋವಿಡ್ 19ನ ಹೊಸ ಪ್ರಕರಣಗಳು ವರದಿಯಾಗಿಲ್ಲ. ಇದು ಸಾರ್ವಜನಿಕರ ಆತಂಕವನ್ನು ಸ್ವಲ್ಪ ಕಡಿಮೆ ಮಾಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು