ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೇಡ್ತಿ–ವರದಾ ನದಿ ಜೋಡಣೆ ಕೈಗೊಂಡಿಲ್ಲ’

Last Updated 23 ಜುಲೈ 2022, 12:48 IST
ಅಕ್ಷರ ಗಾತ್ರ

ಶಿರಸಿ: ಬೇಡ್ತಿ–ವರದಾ ನದಿ ಜೋಡಣೆ ಯೋಜನೆಯನ್ನು ಸರ್ಕಾರ ಜಾರಿಮಾಡಲು ಮುಂದಾಗಿಲ್ಲ. ಡಿ.ಪಿ.ಆರ್.ಗೆ ಒಪ್ಪಿಗೆಯನ್ನೂ ನೀಡಿಲ್ಲ ಹಾಗೂ ಯೋಜನೆಗೆ ಯಾವುದೇ ಅನುದಾನ ನೀಡಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ತಿಳಿಸಿದ್ದಾರೆ.

ಈ ಕುರಿತು ಸಮಿತಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ಪತ್ರಿಕಾ ಹೇಳಿಕೆ ನೀಡಿದ್ದು, ‘ಸ್ವರ್ಣವಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಜನ ಸಮಾವೇಶ ನಡೆಸಿ ಯೋಜನೆ ವಿರೋಧಿಸಲಾಗಿತ್ತು. ಸಮಿತಿಯ ಪದಾಧಿಕಾರಿಗಳು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಯೋಜನೆ ಕೈಬಿಡುವಂತೆಯೂ ಒತ್ತಡ ಹೇರಿದ್ದರು’ ಎಂದು ತಿಳಿಸಿದ್ದಾರೆ.

‘ಬೇಡ್ತಿ–ವರದಾ ಯೋಜನೆಯ ದುಷ್ಪರಿಣಾಮಗಳು, ಬೇಡ್ತಿ ಸಮಿತಿಯ
ಅಹವಾಲುಗಳ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮುಖ್ಯಮಂತ್ರಿ ಗಮನಕ್ಕೂ ತಂದಿದ್ದಾರೆ. ಇವೆಲ್ಲವನ್ನೂ ಗಮನಿಸಿ ಮುಖ್ಯಮಂತ್ರಿ ಸಮಿತಿಗೆ ಯೋಜನೆ ಜಾರಿಗೆ ತಂದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT