ಶುಕ್ರವಾರ, ನವೆಂಬರ್ 15, 2019
22 °C

ಉತ್ತರ ಕನ್ನಡ ಜಿಲ್ಲೆ ವಿಭಜನೆಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವೆ ಜೊಲ್ಲೆ

Published:
Updated:
Prajavani

ಯಲ್ಲಾಪುರ: ‘ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಗಳನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಇದುವರೆಗೂ ಸರ್ಕಾರದ ಮುಂದೆ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರಚನೆಯ ಬಗ್ಗೆ ವದಂತಿಗೆ ಸ್ಪಷ್ಟನೆ ನೀಡಿದರು.

‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಶೇ 50ರಷ್ಟು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಲಾಗುವುದು. ಈ ಇಲಾಖೆಯಲ್ಲಿ ‘ಡಿ’ ದರ್ಜೆ ನೌಕರರಿಂದ ಮೇಲಧಿಕಾರಿಯವರೆಗೂ ಬಹಳ ವರ್ಷಗಳಿಂದ ಬಡ್ತಿ ನೀಡಿಲ್ಲ. ಅವರಿಗೆ ಬಡ್ತಿ ನೀಡಲಾಗುವುದು’ ಎಂದು ಭರವಸೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ, ಮುಖಂಡರಾದ ಪ್ರಮೋದ ಹೆಗಡೆ, ಗೋಪಾಲಕೃಷ್ಣ ಹಂಡ್ರಮನೆ, ಪಟ್ಟಣ ಪಂಚಾಯ್ತಿ ಸದಸ್ಯ ಸೋಮೇಶ್ವರ ನಾಯ್ಕ, ಧೀರಜ ತಿನ್ನೇಕರ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್, ಉಪ ವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ್ ಎಚ್.ವಿಶ್ವನಾಥ ಇದ್ದರು.

ಪ್ರತಿಕ್ರಿಯಿಸಿ (+)