ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ: ಎರಡನೇ ಹಂತದ ಚುನಾವಣೆಗೆ ಅಧಿಸೂಚನೆ

ಜಿಲ್ಲೆಯ 126 ಗ್ರಾಮ ಪಂಚಾಯಿತಿಗಳಲ್ಲಿ ನಾಮಪತ್ರ ಸ್ವೀಕಾರ ಕಾರ್ಯ ಆರಂಭ
Last Updated 11 ಡಿಸೆಂಬರ್ 2020, 11:06 IST
ಅಕ್ಷರ ಗಾತ್ರ

ಕಾರವಾರ: ‘ಜಿಲ್ಲೆಯ 126 ಗ್ರಾಮ ಪಂಚಾಯಿತಿಗಳಲ್ಲಿ ಡಿ.27ರಂದುಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ 665 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಚುನಾವಣೆಗೆ ಶುಕ್ರವಾರವೇ ಅಧಿಸೂಚನೆ ಪ್ರಕಟಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾ ತಾಲ್ಲೂಕುಗಳಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಸ್ವೀಕಾರ ಈಗಾಗಲೇ ಆರಂಭವಾಗಿದ್ದು, 16ರಂದು ಸಲ್ಲಿಸಲು ಕೊನೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ, 19ರಂದು ಹಿಂಪಡೆಯಲು ಅಂತಿಮ ದಿನವಾಗಿದೆ. 27ರಂದು ಬೆಳಿಗ್ಗೆ 7ರಿಂದ ಸಂಜೆ 5ವರೆಗೆ ಮತದಾನ ನಡೆಯಲಿದೆ. 30ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

‘ಚುನಾವಣೆಗಾಗಿ ಒಟ್ಟು 126 ಚುನಾವಣಾಧಿಕಾರಿಗಳು ಹಾಗೂ 126 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ 10ರಿಂದ 15 ಮತಗಟ್ಟೆಗಳಿಗೆ ಸೆಕ್ಟರ್ ಅಧಿಕಾರಿ ಮತ್ತು ಆರೋಗ್ಯ ಪರಿವೀಕ್ಷಕರನ್ನು ನಿಯೋಜಿಸಲಾಗಿದೆ. ಪ್ರತಿ ತಾಲ್ಲೂಕಿಗೆ ಎರಡು ವಿಚಕ್ಷಣಾ ದಳಗಳನ್ನು ನೇಮಿಸಲಾಗಿದೆ. ತಹಶೀಲ್ದಾರ್ ನೇತೃತ್ವದಲ್ಲಿ ಮಾದರಿ ನೀತಿ ಸಂಹಿತೆ ಪಾಲನಾ ತಂಡ ರಚಿಸಲಾಗಿದೆ’ ಎಂದರು.

ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಕಡ್ಡಾಯವಾಗಿದೆ. ಸೋಂಕಿತ ಮತದಾರರು ಪಿ.ಪಿ.ಇ ಕಿಟ್ ಧರಿಸಿ ಮತದಾನ ಮಾಡಬಹುದು ಎಂದು ತಿಳಿಸಿದರು.

ಕ್ರಮದ ಎಚ್ಚರಿಕೆ:

‘ಯೂಟ್ಯೂಬ್ ಚಾನಲ್‌ಗಳಲ್ಲಿ ಕೆಲವು ಅಭ್ಯರ್ಥಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾಹಿತಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಹಲವರು ಮೌಖಿಕವಾಗಿ ದೂರು ನೀಡಿದ್ದಾರೆ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವಂಥ, ತಪ್ಪು ಮಾಹಿತಿಗಳಿಂದ ಕೂಡಿದ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ‍ಪ್ರಕಟಿಸುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಡಾ.ಕೆ.ಹರೀಶಕುಮಾರ್ ಎಚ್ಚರಿಕೆ ನೀಡಿದರು.

–––––––––

ಏಳು ತಾಲ್ಲೂಕುಗಳಲ್ಲಿ ಮತದಾರರು

2,02,621

ಪುರುಷರು

1,94,155

ಮಹಿಳೆಯರು

4

ಇತರರು

3,96,780

ಒಟ್ಟು ಮತದಾರರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT