ಶುಕ್ರವಾರ, ನವೆಂಬರ್ 22, 2019
26 °C

ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ

Published:
Updated:
Prajavani

ಶಿರಸಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನೀಡುವ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಯ ತರಬೇತಿ ಕಾರ್ಯಕ್ರಮ ಸೋಮವಾರದಿಂದ ಇಲ್ಲಿ ಆರಂಭವಾಗಿದೆ.

ಎಂಟನೇ ತರಗತಿ ಮಕ್ಕಳಿಗೆ ಎನ್‌ಎಂಎಂಎಸ್ ಹಾಗೂ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಎನ್‌ಟಿಎಸ್‌ಇ ಪರೀಕ್ಷೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡುತ್ತಿದ್ದಾರೆ. ತಾಲ್ಲೂಕಿನ 120 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ ದೊಡ್ಮನಿ ತರಬೇತಿ ಉದ್ಘಾಟಿಸಿದರು. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸ್ಕಾಲರ್‌ಷಿಪ್ ಪಡೆಯುವ ಜತೆಗೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದು ಎಂದು ಹೇಳಿದರು. 

ಡಯಟ್ ಪ್ರಾಚಾರ್ಯ ಬಿ.ವಿ.ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತರಬೇತುದಾರರಾಗಿ ಗಣೇಶ ಹೆಗಡೆ, ಮಹಾಬಲೇಶ್ವರ, ನಾಗರಾಜ, ಸತೀಶ ಭಾಗವಹಿಸಿದ್ದಾರೆ.

 

ಪ್ರತಿಕ್ರಿಯಿಸಿ (+)