ಸರ್ಕಾರಿ ನೌಕರರೆಂದು ಪರಿಗಣಿಸಲು ಪತ್ರ ಚಳವಳಿ

ಶನಿವಾರ, ಜೂಲೈ 20, 2019
25 °C

ಸರ್ಕಾರಿ ನೌಕರರೆಂದು ಪರಿಗಣಿಸಲು ಪತ್ರ ಚಳವಳಿ

Published:
Updated:
Prajavani

ಕಾರವಾರ: ಸಾರಿಗೆ ಇಲಾಖೆಯ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಪಿಂಚಣಿ ಸೌಲಭ್ಯ ಕೊಡಬೇಕು. ಶೇ 40ರಷ್ಟಿರುವ ವೇತನ ತಾರತಮ್ಯವನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಸೋಮವಾರ ಪತ್ರ ಚಳವಳಿ ನಡೆಸಿದರು.

ನಗರದ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಸಿಬ್ಬಂದಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಪತ್ರಗಳನ್ನು ಬರೆದು ಅಂಚೆ ಮೂಲಕ ಕಳುಹಿಸಿದರು. 

ಸರ್ಕಾರದ ಇತರ ಇಲಾಖೆಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕಠಿಣ ಕೆಲಸವನ್ನು ಸಾರಿಗೆ ಇಲಾಖೆಯ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಎಲ್ಲರಿಗಿಂತ ಹೆಚ್ಚು ವೇತನ ಮತ್ತು ಸವಲತ್ತುಗಳನ್ನು ನೀಡಬೇಕು. ಅದು ಸರ್ಕಾರದ ಧರ್ಮವಾಗಿದೆ. ಈಗ ಎಲ್ಲರಿಗಿಂತ ಕಡಿಮೆ ವೇತನ ನೀಡುತ್ತಿರುವುದು ಸಾರಿಗೆ ನೌಕರರಿಗೆ ಮಾಡಿದ ದ್ರೋಹವಾಗಿದೆ. ಆದ್ದರಿಂದ  ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

‘ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದಾಗಿ ತಾವು ಚುನಾವಣಾ ಪೂರ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ತಿಳಿಸಿದ್ದಿರಿ. ನೆರೆಯ ಆಂಧ್ರಪ್ರದೇಶದಲ್ಲಿ ಸಾರಿಗೆ ನಿಗಮಗಳನ್ನು ಸರ್ಕಾರದಲ್ಲಿ ವಿಲೀನಗೊಳಿಸಲಾಗಿದೆ. ಇದರಿಂದ ರಾಜ್ಯದ ಸಾರಿಗೆ ನೌಕರರಿಗೂ ಆಶಾಭಾವ ಮೂಡಿದೆ’ ಎಂದು ನೌಕರರು ಉಲ್ಲೇಖಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !