ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರನ್ನು ಗೌರವದಿಂದ ಕಾಣಬೇಕು:ಸಚಿವ ಹೆಬ್ಬಾರ

ಉಂಚಳ್ಳಿ ಗ್ರಾ.ಪಂ.:₹5.30 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ
Last Updated 13 ಜುಲೈ 2021, 14:28 IST
ಅಕ್ಷರ ಗಾತ್ರ

ಶಿರಸಿ: ‘ರೈತರು ಸಮೃದ್ಧಿಯಾಗಿದ್ದರೆ ಮಾತ್ರ ದೇಶ ಸದೃಢವಾಗಿರುತ್ತದೆ. ಕೆಲಸದ ನಿಮಿತ್ತ ಕಚೇರಿಗೆ ಬರುವ ರೈತರನ್ನು ಗೌರವದಿಂದ ಕಾಣಬೇಕು, ಅವರ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ಅಧಿಕಾರಿಗಳಿಗೆ ಹೇಳಿದರು.

ತಾಲ್ಲೂಕಿನ ಉಂಚಳ್ಳಿ ಗ್ರಾಮ ಪಂಚಾಯ್ತಿ ಆವರಣದಲ್ಲಿ ಮಂಗಳವಾರ ಕೃಷಿ ಅಭಿಯಾನ ಜಾಗೃತಿ ರಥ ಹಾಗೂ ₹5.30 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ‘ನೌಕರರು ಬೇಡಿಕೆ ಮುಂದಿಟ್ಟು ಹೋರಾಟ ಮಾಡಿದರೆ ಸರ್ಕಾರ ಮಣಿಯುತ್ತದೆ. ಆದರೆ, ಅನ್ನ ಕೊಡುವ ರೈತ ಎಂದೂ ಪ್ರತಿಭಟನೆಯ ಹಾದಿ ಹಿಡಿದಿಲ್ಲ. ಅವರು ಮುನಿಸಿಕೊಂಡು ಮನೆಯಲ್ಲಿ ಕುಳಿತರೆ ದೇಶಕ್ಕೆ ಉಪವಾಸ ನಿಶ್ಚಿತ’ ಎಂದು ಮಾರ್ಮಿಕವಾಗಿ ಹೇಳಿದರು.

‘ರಾಜ್ಯದಲ್ಲಿ ರೈತಪರ ಸರ್ಕಾರ ಇದೆ. ಅಭಿವೃದ್ಧಿ ದಿಶೆಯಲ್ಲಿಯೂ ಉತ್ತಮ ಕೆಲಸ ಮಾಡಲಾಗುತ್ತಿದ್ದು, ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇವೆ’ ಎಂದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ದೇವೆಂದ್ರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಅಣ್ಣಪ್ಪ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯೆ ರತ್ನಾ ಶೆಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಹೆಗಡೆ, ತಾಲ್ಲೂಕು ಪಂಚಾಯ್ತಿ ಇಒ ಎಫ್.ಜಿ.ಚೆನ್ನಣ್ಣನವರ್, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ರಾಮಚಂದ್ರ ಗಾಂವಕರ, ಮುಖಂಡರಾದ ದ್ಯಾಮಣ್ಣ ದೊಡ್ಮನಿ, ಕೃಷಿಕ ಸಮಾಜದ ಎಸ್.ಎನ್.ಭಟ್, ಕೃಷಿ ಇಲಾಖೆ ಉಪನಿರ್ದೇಶಕ ಎಚ್.ನಟರಾಜ, ಸಹಾಯಕ ನಿರ್ದೇಶಕ ಮಧುಕರ ನಾಯ್ಕ, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಹೆಗಡೆ ಇದ್ದರು. ಗ್ರಾಮ ಪಂಚಾಯ್ತಿ ಸದಸ್ಯ ಅರುಣ ಕೊಪ್ಪ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT