ಕಾರವಾರ: ಅಕ್ರಮವಾಗಿ ಸಂಗ್ರಹಿಸಿದ್ದ 45 ಟನ್ ಮರಳು ಜಪ್ತಿ

ಕಾರವಾರ: ತಾಲ್ಲೂಕಿನ ಸುಂಕೇರಿ, ನಂದನಗದ್ದಾ, ಗಾಬಿತವಾಡಾ ಹಾಗೂ ನದಿವಾಡದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 45 ಟನ್‌ಗಳಷ್ಟು ಮರಳನ್ನು, ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ನೇತೃತ್ವದ ತಂಡವು ಬುಧವಾರ ಜಪ್ತಿ ಮಾಡಿತು.
ಮರಳು ಅಡ್ಡೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದಾಗ ಅನಧಿಕೃತವಾಗಿ ಸಂಗ್ರಹಿಸಿದ್ದು ಪತ್ತೆಯಾಯಿತು. ಜಪ್ತಿ ಮಾಡಲಾದ ಮರಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಬಳಸಿಕೊಳ್ಳಲು ಜಿಲ್ಲಾ ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಇದೇವೇಳೆ, ಕಾಳಿ ನದಿ ಪಾತ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ದೋಣಿಗಳ ಮೂಲಕ ತೆರಳಿ, ಅಕ್ರಮವಾಗಿ ಮರಳು ತೆಗೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.
ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ನಿಶ್ಚಲ್ ನರೋನಾ, ಪೊಲೀಸ್ ವೃತ್ತ ನಿರೀಕ್ಷಕ ಸಿದ್ದಪ್ಪ ಬೀಳಗಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಮತ್ತು ಪೋಲೀಸ್ ಇಲಾಖೆಗಳ ಸಿಬ್ಬಂದಿ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.