ಸೋಮವಾರ, ಜೂನ್ 21, 2021
30 °C

ಜಿಲ್ಲಾ ಆಸ್ಪತ್ರೆ 400 ಹಾಸಿಗೆ ಕಟ್ಟಡ: ಅಧಿಕಾರಿಗಳಿಂದ ಜೈಲು ಜಾಗ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಜಿಲ್ಲಾ ಆಸ್ಪತ್ರೆಯ 400 ಹಾಸಿಗೆಗಳ ಹೊಸ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಜೈಲು ಜಾಗವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಎಂಜಿನಿಯರ್ ಎಚ್.ಎನ್.ಶ್ರೀನಿವಾಸ ಈಚೆಗೆ ಪರಿಶೀಲಿಸಿದರು. 

ಜಿಲ್ಲಾ ಕಾರಾಗೃಹವನ್ನು ಬೆಳಸೆ ಗ್ರಾಮಕ್ಕೆಸ್ಥಳಾಂತರ ಮಾಡಕು ಕ್ರಮ ಕೈಗೊಳ್ಳುವುದಾಗಿ ಕಾರಾಗೃಹಗಳ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆಗೆ ಪತ್ರ ಬರೆದು ತಿಳಿಸಿದೆ. ಈ ಸಂಬಂಧ ಶ್ರೀನಿವಾಸ ನೇತೃತ್ವದಲ್ಲಿ ಅಧಿಕಾರಿಗಳು ಈ ಪ್ರದೇಶವನ್ನು ಸಮೀಕ್ಷೆ ಮಾಡಿದರು. ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಅನುದಾನ ಘೋಷಣೆಯಾಗಿದ್ದು, ನಿರ್ಮಾಣಕ್ಕೆ ಪೂರ್ವಭಾವಿ ಕೆಲಸಗಳನ್ನು ಪ್ರಾರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದರು. 

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ಎಂ.ವಿ.ವಾಲಿ ಮತ್ತು ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಎಸ್.ವಿ.ಮಾಹುಲಿ, ಕಾರವಾರ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಶಿವಾನಂದ ದೊಡಮನಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು