ಶನಿವಾರ, ಮೇ 28, 2022
24 °C

ಕರ್ತವ್ಯ ನಿರತ ಎ.ಎಸ್.ಐ ಹೃದಯಾಘಾತದಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ನಗರದ ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಅಬ್ದುಲ್ ಖಾದರ್ ಮಹ್ಮದ್ ಶೇಖ್ (58), ಬುಧವಾರ ಕರ್ತವ್ಯ ನಿರತರಾಗಿದ್ದಾಗ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ 8.30ರಕ್ಕೆ ಸಂಚಾರ ಪೊಲೀಸ್ ಠಾಣೆ ಎದುರು ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಠಾಣೆಗೆ ತೆರಳಿದ್ದರು. ಅಲ್ಲಿ ಏಕಾಏಕಿ ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು ಎಂದು ಸಂಚಾರ ಠಾಣೆಯ ಇನ್‌ಸ್ಪೆಕ್ಟರ್ ನಾಗಪ್ಪ ತಿಳಿಸಿದ್ದಾರೆ.

ಕಾರವಾರದ ನಿವಾಸಿಯಾಗಿದ್ದ ಅವರು, 1992ರ ಡಿ.23ರಂದು ಪೊಲೀಸ್ ಕಾನ್‌ಸ್ಟೆಬಲ್ ಆಗಿ ವೃತ್ತಿ ಆರಂಭಿಸಿದರು. ಕುಮಟಾ, ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2019ರ ಜುಲೈ 7ರಂದು ಎ.ಎಸ್.ಐ ಆಗಿ ಬಡ್ತಿ ಹೊಂದಿ, ಕಾರವಾರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು