ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ರಿಮ್ಸ್’ಗೆ ಆಮ್ಲಜನಕ ಸಂಗ್ರಹಣಾ ಘಟಕ ಮಂಜೂರು

Last Updated 6 ಮೇ 2021, 16:31 IST
ಅಕ್ಷರ ಗಾತ್ರ

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಆರು ಕಿಲೋ ಲೀಟರ್ ದ್ರವೀಕೃತ ಆಮ್ಲಜನಕ ಸಂಗ್ರಹಣಾ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರವು ಗುರುವಾರ ಅನುಮತಿ ನೀಡಿದೆ.

ಇದರಲ್ಲಿ ನಿಮಿಷಕ್ಕೆ 390 ಲೀಟರ್ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕವೂ ಸೇರಿದೆ. ಈ ಘಟಕಗಳು ಮೂರು ವಾರಗಳಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ ತಿಳಿಸಿದ್ದಾರೆ.

‘ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮತ್ತು ಶಾಸಕಿ ರೂಪಾಲಿ ನಾಯ್ಕ ಅವರು ಈ ಘಟಕದ ಅವಶ್ಯಕತೆಯನ್ನು ಸರ್ಕಾರಕ್ಕೆ ಮನದಟ್ಟು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು ₹ 70.50 ಲಕ್ಷ ವೆಚ್ಚದಲ್ಲಿ ಇದರ ಸ್ಥಾಪನೆಯಾಗಲಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT