ಗುರುವಾರ , ಮೇ 13, 2021
22 °C

ಕಾರು, ಲಾರಿ ಮುಖಾಮುಖಿ ಡಿಕ್ಕಿ: ಒಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 63ರ ಕಂಚಿನಬಾಗಿಲು ಬಳಿಯ ತಿರುವಿನಲ್ಲಿ ಬುಧವಾರ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕಾರವಾರದವರಾಗಿದ್ದು, ಹುಬ್ಬಳ್ಳಿಯ ಶಾಂತಿನಗರ ಕೇಶವಾಪುರದಲ್ಲಿ ನೆಲೆಸಿರುವ ಗಣಪತಿ ವಿಠೋಬಾ ಗಾಂವಕರ (61) ಮೃತರು. ಕಾರಿನಲ್ಲಿದ್ದ ಪ್ರೀತಿ ಚಂದ್ರಹಾಸ ಗಾಂವಕರ (30) ಮತ್ತು ಚಾಲಕ ಮಂಜುನಾಥ ಕೌಜಗೇರಿ (41) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರೀತಿ ಗಾಂವಕರ ಅವರು ತಂದೆ ಗಣಪತಿ ಗಾಂವಕರ ಜತೆಗೆ ಕಾರವಾರದ ಮಾಜಾಳಿಯಲ್ಲಿ ಮೃತರಾದ ತಮ್ಮ ಮಾವನ ಅಂತಿಮ ಸಂಸ್ಕಾರಕ್ಕೆಂದು ಹುಬ್ಬಳ್ಳಿಯಿಂದ ಹೊರಟಿದ್ದರು. ಮಹಾರಾಷ್ಟ್ರ ನೋಂದಣಿ ಸಂಖ್ಯೆಯ ಲಾರಿ ಅಂಕೋಲಾದಿಂದ ಯಲ್ಲಾಪುರ ಮಾರ್ಗವಾಗಿ ಚಲಿಸುತ್ತಿತ್ತು. ಈ ವೇಳೆ ರಸ್ತೆಯ ತಿರುವಿನಲ್ಲಿ ಎರಡೂ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ, ಸಿ.ಪಿ.ಐ ಕೃಷ್ಣಾನಂದ ನಾಯ್ಕ, ಪಿ.ಎಸ್.ಐ ಈ.ಸಿ.ಸಂಪತ್ ಭೇಟಿ ನೀಡಿ ಪರಿಶೀಲಿಸಿದರು. ಹೆದ್ದಾರಿ ಗಸ್ತು ವಾಹನ ಮತ್ತು ಪೊಲೀಸ್ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ಇದೇ ಮಾರ್ಗದಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬಾಲಕಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು