ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಮಕ್ಕಳ ಅಶ್ಲೀಲ ವಿಡಿಯೊ ಅಪ್‌ಲೋಡ್, ಅಪರಾಧಿಗೆ ಶಿಕ್ಷೆ

Last Updated 22 ಸೆಪ್ಟೆಂಬರ್ 2022, 15:44 IST
ಅಕ್ಷರ ಗಾತ್ರ

ಕಾರವಾರ: ಮಕ್ಕಳ ಅಶ್ಲೀಲ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್‌ಲೋಡ್ ಮಾಡಿದ ಅಪರಾಧಿಗೆ ಇಲ್ಲಿನ ಸಿ.ಜೆ.ಎಂ ನ್ಯಾಯಾಲಯವು ಮೂರು ತಿಂಗಳು ಸಾದಾ ಜೈಲು ಶಿಕ್ಷೆ ಹಾಗೂ ₹ 10 ಸಾವಿರ ದಂಡವನ್ನು ವಿಧಿಸಿದೆ.

ಮಹಾರಾಷ್ಟ್ರದ ನಾಗಪುರ ಸಮೀಪದ ಶಿವನಗಾಂವ ನಿವಾಸಿ ಹರ್ಷಲ್ ರೌಲ್ (37) ಶಿಕ್ಷೆಗೆ ಗುರಿಯಾದವನು. ಆತನ ವಿರುದ್ಧ 2021ರ ಜುಲೈ 6ರಂದು ಕಾರವಾರದ ಸಿ.ಇ.ಎನ್ ಅಪರಾಧಗಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿ ಪೊಲೀಸ್ ಇನ್‌ಸ್ಪೆಕ್ಟರ್ ಸೀತಾರಾಮ.ಪಿ ನ್ಯಾಯಾಲಯಕ್ಕೆ ದೋಷಾರೋಪ‍ ಪಟ್ಟಿ ಸಲ್ಲಿಸಿದ್ದರು. ತನಿಖಾ ತಂಡದಲ್ಲಿ ಸಿಬ್ಬಂದಿ ಸುದರ್ಶನ ನಾಯ್ಕ, ಮಂಜುನಾಥ ಹೆಗಡೆ ಹಾಗೂ ಹನುಮಂತಪ್ಪ ಕಬಾಡಿ ಕಾರ್ಯ ನಿರ್ವಹಿಸಿದ್ದರು. ಹಿರಿಯ ಸರ್ಕಾರಿ ಅಭಿಯೋಜಕ ಮಂಜುನಾಥ ನಾಯ್ಕ ಸರ್ಕಾರದ ಪರ ವಾದ ಮಂಡಿಸಿದ್ದರು.

ತನಿಖೆಯಲ್ಲಿ ಕಾರ್ಯ ನಿರ್ವಹಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಹುಮಾನ ಪ್ರಕಟಿಸಿದ್ದಾರೆ.

ಎ.ಟಿ.ಎಂ ಕೇಂದ್ರದಲ್ಲಿ ಕಳವಿಗೆ ಯತ್ನ
ಕಾರವಾರ:
ತಾಲ್ಲೂಕಿನ ಮಲ್ಲಾಪುರದ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯ ಎ.ಟಿ.ಎಂ. ಕೇಂದ್ರಕ್ಕೆ ಬುಧವಾರ ರಾತ್ರಿ ಬಂದ ಅಪರಿಚಿತನೊಬ್ಬ ಕಳವು ಮಾಡಲು ಯತ್ನಿಸಿದ್ದಾನೆ. ಅಲ್ಲದೇ ಕೇಂದ್ರದ ಎರಡು ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ತೆಗೆದುಕೊಂಡು ಹೋಗಿದ್ದಾನೆ.

ಎ.ಟಿ.ಎಂ. ಕೇಂದ್ರದ ಸೇಫ್ ಲಾಕರ್‌ನ ಹೊರ ಬಾಗಿಲನ್ನು ಕಿತ್ತು ಹಾಕಿದ್ದಾನೆ. ನೀಲಿ ಬಣ್ಣದ ಟಾರ್ಪಲ್ ಸುತ್ತಿಕೊಂಡು ಬಂದಿದ್ದ ಆರೋಪಿಯು, ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಕಳಚುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT