ಶುಕ್ರವಾರ, ಸೆಪ್ಟೆಂಬರ್ 17, 2021
22 °C

‘ವಿರೋಧ ಪಕ್ಷಗಳದ್ದು ಭಯೋತ್ಪಾದಕರ ಪರ ನಿಲುವು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ‘ಭಯೋತ್ಪಾದನೆ ನಿಗ್ರಹದ ಸಂಬಂಧ ಕೇಂದ್ರ ಸರ್ಕಾರ ಮಸೂದೆ ಮಂಡಿಸುವಾಗ ಚರ್ಚೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಸಹಪಕ್ಷಗಳು ಭಾಗವಹಿಸದಿರುವುದು ಅವು ಭಯೋತ್ಪಾದಕರ ಪರವಾದ ನಿಲುವು ಹೊಂದಿವೆ ಎಂಬುದನ್ನು ಸ್ಪಷ್ಟಪಡಿಸಿದೆ’ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಟೀಕಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದೇಶದ ಆಂತರಿಕ ಭದ್ರತೆ, ಕೋವಿಡ್ ನಿಯಂತ್ರಣದಂತಹ ಮಹತ್ವದ ಚರ್ಚೆ ನಡೆಯುತ್ತಿದ್ದಾಗ ಪಾಲ್ಗೊಳ್ಳದೆ ವಿರೋಧ ಪಕ್ಷಗಳು ತಮ್ಮ ಪಲಾಯನವಾದ ಬಹಿರಂಗಗೊಳಿಸಿಕೊಂಡಿವೆ’ ಎಂದು ಆರೋಪಿಸಿದ್ದಾರೆ. 

‘ದೇಶದ ಹಿತಕಾಯುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದ್ದಾಗ ಅದನ್ನು ಧಿಕ್ಕರಿಸಿ ನಡೆದ ಕಾಂಗ್ರೆಸ್‌ ನಾಯಕರು ತಮ್ಮ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು